ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತ ರಂಗದಲ್ಲಿ ಕಾರ್ಯದೊತ್ತಡ ಹೆಚ್ಚಿರುವುದರಿಂದ ತಾಳ್ಮೆ ಮಿತಿ ಮೀರಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪ ಮಾಡಿಕೊಳ್ಳುವಿರಿ. ಹಿರಿಯರ ಸಲಹೆಗಳು ಪಥ್ಯವಾಗದೇ ಹೋಗಬಹುದು. ತಾಳ್ಮೆ ಅಗತ್ಯ.ವೃಷಭ: ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಕಾರ್ಯಸಾಧನೆಗೆ ಕಠಿಣ ಪರಿಶ್ರಮ ಅಗತ್ಯ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಕಡಿವಾಣ ಇರಲಿ. ವಿದ್ಯಾರ್ಥಿಗಳ ಪರಿಶ್ರಮಕ್ಕೆ ತಕ್ಕ ಬೆಲೆ ಸಿಕ್ಕೀತು.ಮಿಥುನ: ಗೃಹೋಪಯೋಗಿ ವಸ್ತುಗಳ ಖರೀದಿಗೆ