ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಂಗಾತಿಯ ಆರೋಗ್ಯ ಹದತಪ್ಪಿ ಆಸ್ಪತ್ರೆಗೆ ಅಲೆದಾಡಬೇಕಾಗುತ್ತದೆ. ಮಕ್ಕಳಿಗಾಗಿ ಹೊಸ ವಸ್ತುಗಳ ಖರೀದಿ ಮಾಡುವಿರಿ. ಶುಭ ಮಂಗಲ ಕಾರ್ಯಗಳಿಗೆ ಓಡಾಟ ನಡೆಸಬೇಕಾಗುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾದೀತು.ವೃಷಭ: ಸ್ತ್ರೀಯರಿಂದ ಹೊಸ ಸಮಸ್ಯೆಗಳು ತೋರಿಬರಲಿವೆ. ಎಚ್ಚರಿಕೆಯಿಂದ ವ್ಯವಹರಿಸುವುದು ಮುಖ್ಯ. ವಾಸ ಸ್ಥಳ ಬದಲಾವಣೆಗೆ ಚಿಂತನೆ ನಡೆಸುವಿರಿ. ಸಾಂಸಾರಿಕವಾಗಿ ಹೊಂದಾಣಿಕೆ ಅಗತ್ಯ. ಓಡಾಟದಿಂದ ದೇಹಾಯಾಸವಾಗಬಹುದು.ಮಿಥುನ: ಕೌಟುಂಬಿಕ ಜವಾಬ್ಧಾರಿಗಳನ್ನು ನಿಭಾಯಿಸಲು ಹೊಸ ವ್ಯಕ್ತಿಗಳ ಸಹಾಯ