ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು, ಮಂಗಳವಾರ, 4 ಜೂನ್ 2019 (08:53 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


 
ಮೇಷ: ಏನೇ ಕಷ್ಟಗಳು ಬಂದರೂ ಸ್ವಂತ ಬಲದ ಮೇಲೆ ಮುನ್ನಡೆದರೆ ಯಶಸ್ಸು ಖಂಡಿತಾ ಸಾಧ್ಯ. ವಾಸ ಸ್ಥಳ ಬದಲಾವಣೆಗೆ ಚಿಂತನೆ ಮಾಡುವಿರಿ. ಉದ್ಯೋಗದಲ್ಲಿ ಯಥಾ ಪ್ರಕಾರ ಒತ್ತಡದ ವಾತಾವರಣವಿರಲಿದೆ.
 
ವೃಷಭ: ಹೊಸ ಕೆಲಸಗಳಿಗೆ ಕೈಹಾಕಬೇಕೆಂದರೂ ಹಿತಶತ್ರುಗಳಿಂದ ಅಡ್ಡಿ ಆತಂಕಗಳು ಎದುರಾಗಬಹುದು. ವಾತ ಸಂಬಂಧೀ ಆರೋಗ್ಯ ಸಮಸ್ಯೆ ಕಾಡಬಹುದು. ಮಾನಸಿಕವಾಗಿ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ.
 
ಮಿಥುನ: ಆಸ್ತಿ ವಿಚಾರವಾಗಿ ಸಹೋದರರೊಂದಿಗೆ ಕಿರಿ ಕಿರಿ ಉಂಟಾಗಬಹುದು. ಹಿರಿಯರ ಮಧ್ಯಸ್ಥಿಕೆ ಅಗತ್ಯ. ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಎದುರಾಗಬಹುದು. ವಾಹನ ಖರೀದಿಗೆ ಮುಂದಾಗುವಿರಿ. ದಿನದಂತ್ಯಕ್ಕೆ ನೆಮ್ಮದಿ.
 
ಕರ್ಕಟಕ: ಉದ್ಯೋಗ ಕ್ಷೇತ್ರದಲ್ಲಿ ಮಹಿಳಾ ಉದ್ಯೋಗಿಗಳಿಂದ ಕಷ್ಟದ ಸಂದರ್ಭದಲ್ಲಿ ಉಪಕಾರವಾಗುವುದು. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಖರ್ಚು ವೆಚ್ಚಗಳು ಹೆಚ್ಚುವುದು.
 
ಸಿಂಹ: ಆರ್ಥಿಕವಾಗಿ ನಾನಾ ಮೂಲಗಳಿಂದ ಧನಾಗಮನವಾಗಲಿದ್ದು, ಅಂದುಕೊಂಡ ಕಾರ್ಯಗಳನ್ನು ನೆರವೇರಿಸುವಿರಿ. ವಿವಾಹ ಪ್ರಯತ್ನದಲ್ಲಿ ಫಲ ಕಾಣುವಿರಿ. ನಿರುದ್ಯೋಗಿಗಳು ಕೆಲವು ಕಾಲ ತಾಳ್ಮೆಯಿಂದಿರಬೇಕು.
 
 
ಕನ್ಯಾ: ಅನ್ಯಾಯ ಕಂಡರೆ ಸಿಡಿದೇಳುವ ನಿಮ್ಮ ಸ್ವಭಾವ ನಿಮಗೇ ತಿರುಗುಬಾಣವಾಗಬಹುದು. ಎಚ್ಚರಿಕೆಯಿಂದ ವ್ಯವಹರಿಸಿ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಸಹಕಾರ ಸಿಗುವುದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ದೊರಕುವುದು.
 
ತುಲಾ: ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ಧಾರ್ಮಿಕ ಕಾರ್ಯಗಳಲ್ಲಿ ಪಾಲ್ಗೊಳ್ಳುವಿರಿ. ಭೂಮಿ, ಮನೆ ಖರೀದಿಗೆ ಉತ್ತಮ ಸಮಯ. ಆಯ ವ್ಯಯ ಲೆಕ್ಕ ಪತ್ರಗಳನ್ನು ಸರಿಯಾಗಿಟ್ಟುಕೊಳ್ಳಿ.
 
ವೃಶ್ಚಿಕ: ಹೊಸ ಕೆಲಸಗಳಿಗೆ ಕೈಹಾಕುವಾಗ ಸಂಗಾತಿಯೊಡನೆ ಪರಾಮರ್ಶಿಸಿ ಯೋಚಿಸಿ ಹೆಜ್ಜೆಯಿಡಿ. ಹಿತ ಶತ್ರುಗಳು ಬೆನ್ನ ಹಿಂದೆಯೇ ಇರುವರು. ದಾಯಾದಿಗಳೊಂದಿಗಿನ ಮನಸ್ತಾಪಗಳು ದೂರವಾಗಬಹುದು.
 
ಧನು: ಕೌಟುಂಬಿಕವಾಗಿ ಅಭಿವೃದ್ಧಿ ಗೋಚರಕ್ಕೆ ಬರುವುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ. ಇಲ್ಲದ ಮಾನಸಿಕ ಕಿರಿ ಕಿರಿಗಳನ್ನು ಮೈಮೇಲೆಳೆದುಕೊಳ್ಳಬೇಡಿ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ.
 
ಮಕರ: ಹಲವು ದಿನಗಳಿಂದ ಅಪೇಕ್ಷೆ ಪಟ್ಟಿದ್ದ ಕೆಲಸಗಳು ಅನಿರೀಕ್ಷಿತವಾಗಿ ನೆರವೇರಿ ಮನಸ್ಸಿಗೆ ನೆಮ್ಮದಿಯಾಗುವುದು. ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರುವುದು. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.
 
ಕುಂಭ: ಶುಭ ಮಂಗಲ ಕಾರ್ಯ ನಿಮಿತ್ತ ಅಧಿಕ ಓಡಾಟ ನಡೆಸಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ. ತಾಳ್ಮೆಯೇ ನಿಮ್ಮ ದೊಡ್ಡ ಅಸ್ತ್ರ. ನಿರುದ್ಯೋಗಿಗಳು ಉದ್ಯೋಗ ಅರಸಿಕೊಂಡು ದೂರ ಸಂಚಾರ ಮಾಡಬೇಕಾಗುತ್ತದೆ.
 
ಮೀನ: ಕಾರ್ಯಕ್ಷೇತ್ರದಲ್ಲಿ ಶತ್ರುಬಾಧೆಯಿಂದ ಹಿನ್ನಡೆಯುಂಟಾಗಬಹುದು. ಆದರೆ ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ಖರ್ಚು ವೆಚ್ಚಗಳ ಬಗ್ಗೆ ಹಿಡಿತ ಅಗತ್ಯ. ಹಳೆಯ ಮಿತ್ರರನ್ನು ಭೇಟಿಯಾಗುವಿರಿ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ...

news

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ನಕ್ಷತ್ರಗಳಿಗನುಗುಣವಾಗಿ ಯಾವ ಗಾಯತ್ರಿ ಮಂತ್ರ ಜಪಿಸಬೇಕು?

ಬೆಂಗಳೂರು: ಒಟ್ಟು 27 ನಕ್ಷತ್ರಗಳಿದ್ದು, ಪ್ರತಿಯೊಂದು ನಕ್ಷತ್ರಕ್ಕೂ ಪ್ರತ್ಯೇಕ ಗಾಯತ್ರಿ ಮಂತ್ರವಿದೆ. ...