Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಭಾನುವಾರ, 30 ಜೂನ್ 2019 (08:57 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರುವುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿ ಸಾಧ್ಯತೆ. ಖರ್ಚಿನ ಬಗ್ಗೆ ಮಿತಿಯಿರಲಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಕೊಡಬೇಕಾಗುವುದು.
 
ವೃಷಭ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಏಕಾಗ್ರತೆಯ ಕೊರತೆ ಕಂಡುಬರುವುದು. ಅನವಶ್ಯಕ ಖರ್ಚುಗಳಿಗೆ ಕಡಿವಾಣ ಹಾಕಬೇಕು. ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳು ಬರಬಹುದು.
 
ಮಿಥುನ: ಸ್ವ ಉದ್ಯೋಗಿಗಳಿಗೆ ನಿವ್ವಳ ಲಾಭ ಸಿಗಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಶುಭ ದಿನ. ಅನಿರೀಕ್ಷಿತವಾಹಿ ಹಳೆಯ ಮಿತ್ರರನ್ನು ಭೇಟಿಯಾಗುವಿರಿ. ದೇವಾಲಯಗಳಿಗೆ ಭೇಟಿ ಕೊಡುವಿರಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
 
ಕರ್ಕಟಕ: ಮನೆಗೆ ಸಂಬಂಧಿಸಿದ ಕೆಲಸ ಕಾರ್ಯಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ನೆರೆಹೊರೆಯವರೊಂದಿಗೆ ಎಚ್ಚರಿಕೆಯಿಂದ ವರ್ತಿಸಿ. ಅವಿವಾಹಿತರು ಮನಸ್ಸಿಗೆ ಒಪ್ಪುವ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗುತ್ತದೆ.
 
ಸಿಂಹ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಸ್ಥಾನ ಮಾನ ಹೆಚ್ಚಳವಾಗಲಿದೆ. ದಾಂಪತ್ಯ ಜೀವನದಲ್ಲಿ ಹೊಂದಾಣಿಕೆ ಕೊರತೆ ಎದುರಾಗಬಹುದು. ತಾಳ್ಮೆಯಿಂದ ನಿಭಾಯಿಸಬೇಕು. ಆರ್ಥಿಕವಾಗಿ ಚೇತರಿಕೆ ಕಾಣುವಿರಿ.
 
 
ಕನ್ಯಾ: ಯಾರನ್ನೂ ಅತಿಯಾಗಿ ನಂಬಲು ಹೋಗಬೇಡಿ. ಅತಿಯಾದ ವಿಶ್ವಾಸ ದುರುಪಯೋಗಕ್ಕೆ ಕಾರಣವಾದೀತು. ದೇವತಾ ಕಾರ್ಯಗಳನ್ನು ನೆರವೇರಿಸುವಿರಿ. ಯಾವುದೇ ಕೆಲಸಕ್ಕೆ ಮೊದಲು ಹಿರಿಯರ ಸಲಹೆ ಪಡೆಯಿರಿ.
 
ತುಲಾ: ಸಾಲ ಪಾವತಿ ಚಿಂತೆ ಕಾಡುವುದು. ಆರ್ಥಿಕವಾಗಿ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಹುಡುಕುವಿರಿ. ಕಷ್ಟದ ಸಮಯದಲ್ಲಿ ಬಂಧು ಮಿತ್ರರಿಂದ ಸಹಾಯವಾಗುವುದು. ದಿನದಂತ್ಯಕ್ಕೆ ಶುಭ ಸುದ್ದಿ.
 
ವೃಶ್ಚಿಕ: ಸಾಂಸಾರಿಕವಾಗಿ ನೆಮ್ಮದಿಯ ದಿನ ನಿಮ್ಮದಾಗಲಿದೆ. ಸಂಗಾತಿಯೊಂದಿಗೆ ಸುಂದರ ಕ್ಷಣ ಕಳೆಯುವಿರಿ. ಹೊಸ ವಸ್ತುಗಳ ಖರೀದಿಗೆ ಮುಂದಾಗುವಿರಿ. ಆದರೆ ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಬಂದಾವು. ಎಚ್ಚರಿಕೆಯಿರಲಿ.
 
ಧನು: ಸಹೋದರರೊಂದಿಗೆ ಆಸ್ತಿ ವಿಚಾರಕ್ಕೆ ಕಿರಿ ಕಿರಿಯಾಗಬಹುದು. ಆದರೆ ವೃತ್ತಿ ರಂಗದಲ್ಲಿ ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ಆರ್ಥಿಕವಾಗಿ ಹಣಕಾಸಿಗೆ ಕೊರತೆಯಾಗದು. ಸಂಗಾತಿಯ ಮಾತಿಗೆ ಕಿವಿಗೊಡಿ.
 
ಮಕರ: ಸಾಮಾಜಿಕವಾಗಿ ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಪ್ರೇಮಿಗಳಿಗೆ ಮನೆಯವರ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳಿಗೆ ಸಂತಾನ ಸೂಚಕ ಫಲ ಕಂಡುಬರಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಯೋಗವಿದೆ.
 
ಕುಂಭ: ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಚಿಂತನೆ ನಡೆಸುವರು. ಅವಿವಾಹಿತರು ವಿವಾಹ ಪ್ರಯತ್ನ ನಡೆಸಲು ಸಕಾಲ. ಸಾಧು ಸಂತರ ಭೇಟಿಯಾಗುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡುವಿರಿ.
 
ಮೀನ: ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ದಾಯಾದಿಗಳೊಂದಿಗಿನ ಆಸ್ತಿ ವಿವಾದಕ್ಕೆ ಹಿರಿಯರ ಮಧ್ಯಸ್ಥಿಕೆಯಲ್ಲಿ ಅಂತ್ಯ ಹಾಡುವಿರಿ. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಕೊಡದಿರಿ. ದೇವತಾ ಪ್ರಾರ್ಥನೆಯಿಂದ ಶುಭ ಫಲ.
ಇದರಲ್ಲಿ ಇನ್ನಷ್ಟು ಓದಿ :