ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು, ಶುಕ್ರವಾರ, 5 ಜುಲೈ 2019 (08:39 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


 
ಮೇಷ: ಹೊಸ ವ್ಯವಹಾರಗಳಲ್ಲಿ ವಂಚನೆಗೊಳಗಾಗುವ ಭೀತಿಯಿದೆ, ಎಚ್ಚರಿಕೆ ಅಗತ್ಯ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಸಾಹಿತ್ಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ. ಆರೋಗ್ಯದಲ್ಲಿ ಸುಧಾರಣೆ.
 
ವೃಷಭ: ವಿದ್ಯಾರ್ಥಿಗಳಿಗೆ ಯಶಸ್ಸು ಸಿಗಬೇಕಾದರೆ ಕಠಿಣ ಪರಿಶ್ರಮ ಪಡಬೇಕಾಗುತ್ತದೆ. ಕೃಷಿಕರ ಬವಣೆಗೆ ಕೊನೆಯಿರಲ್ಲ. ಆರ್ಥಿಕವಾಗಿ ಧನಾಗಮನಕ್ಕೆ ಇತರೆ ಮಾರ್ಗಗಳ ಬಗ್ಗೆ ಯೋಚನೆ ಮಾಡುವಿರಿ.
 
ಮಿಥುನ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ಎದುರಾಗುತ್ತವೆ. ಇದರಿಂದ ಕೆಲಸ ಕಾರ್ಯಗಳು ಅಂದುಕೊಂಡ ರೀತಿಯಲ್ಲಿ ಸಾಗದು. ಕೌಟುಂಬಿಕವಾಗಿ ಸಂಗಾತಿಯ ಸಲಹೆಗಳಿಗೆ ಕಿವಿಗೊಡಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಕೊಡಬೇಕಾಗುತ್ತದೆ.
 
ಕರ್ಕಟಕ: ಮನೆಯಲ್ಲಿ ಸಂಗಾತಿ ಜತೆಗೆ ಕೌಟುಂಬಿಕ ನಿರ್ಧಾರಗಳನ್ನು ತೆಗೆದುಕೊಳ್ಳುವ ವಿಚಾರದಲ್ಲಿ ಮನಸ್ತಾಪವಾಗಬಹುದು. ಬಂಧು ಮಿತ್ರರಿಂದ ಚಾಡಿ ಮಾತು ಕೇಳಬೇಕಾಗಬಹುದು. ನೂತನ ದಂಪತಿಗಳಿಗೆ ಶುಭ ದಿನ.
 
ಸಿಂಹ: ಹಣಕಾಸಿನ ತೊಂದರೆಯಿದ್ದರೂ ಅಂದುಕೊಂಡ ಕಾರ್ಯಗಳನ್ನು ಸುಲಲಿತವಾಗಿ ನೆರವೇರಿಸುವಿರಿ. ವಿದ್ಯಾರ್ಥಿಗಳು ಶಿಕ್ಷಕ ವೃಂದದವರ ಮೆಚ್ಚುಗೆಗೆ ಪಾತ್ರರಾಗಲಿದ್ದಾರೆ. ಉದ್ಯೋಗದಲ್ಲಿ ಮುನ್ನಡೆ.
 
 
ಕನ್ಯಾ: ವಿದ್ಯಾರ್ಥಿಗಳಿಗೆ ವಿದ್ಯಾಭ್ಯಾಸದಲ್ಲಿ ಆಲಸ್ಯತನ ಕಂಡುಬರಬಹುದು. ಆರೋಗ್ಯದಲ್ಲಿ ಕೊಂಚ ಏರುಪೇರಾಗಲಿದೆ. ಸಾಲ ಮರುಪಾವತಿ ಚಿಂತೆ ಕಾಡುವುದು. ಅನಿರೀಕ್ಷಿತವಾಗಿ ಹಳೆಯ ಮಿತ್ರನ ಭೇಟಿಯಾಗುವಿರಿ.
 
ತುಲಾ: ಆಲಸ್ಯತನ ಎನ್ನುವುದು ಕೆಲಸ ಹಾಳು ಮಾಡುತ್ತದೆ ಎಂದು ನೆನಪಿರಲಿ. ಉದಾಸೀನ ಪ್ರವೃತ್ತಿಯಿಂದ ಸದವಕಾಶಗಳನ್ನು ಕಳೆದುಕೊಳ್ಳಬೇಡಿ. ಶೀತ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರಬಹುದು.
 
ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಅಸಮಾಧಾನಕ್ಕೆ ಕಾರಣರಾಗುವಿರಿ. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹಿನ್ನಡೆಯಾಗಲಿದೆ. ಮನೆಗೆ ಬೇಕಾದ ವಸ್ತುಗಳಿಗೆ ಖರ್ಚುವೆಚ್ಚ ಮಾಡುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.
 
ಧನು: ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸುವ ಬಗ್ಗೆ ಚಿಂತನೆ ನಡೆಸುವಿರಿ. ಯಾರದೋ ಮಾತಿಗೆ ನಿಮ್ಮ ಬಗ್ಗೆ ಕೀಳರಿಮೆ ಬೆಳೆಸಿಕೊಳ್ಳಬೇಡಿ. ನಿಮ್ಮ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.
 
ಮಕರ: ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ. ವೃತ್ತಿ ರಂಗದಲ್ಲಿ ಅಧಿಕ ಕಾರ್ಯದೊತ್ತಡವಿರುತ್ತದೆ. ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ದೂರ ಸಂಚಾರ ಯೋಗವಿದೆ.
 
ಕುಂಭ: ಸರಕಾರಿ ಕೆಲಸಗಳಲ್ಲಿ ಜಯ ಸಿಗುವುದು. ಆಸ್ತಿ ವಿವಾದದಲ್ಲಿ ನಿಮಗೆ ಅನುಕೂಲಕರವಾದ ತೀರ್ಪು ಬರಲಿದೆ. ಸಂಗಾತಿಯ ಆರೋಗ್ಯದ ಬಗ್ಗೆ ನಿಗಾವಹಿಸಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ಕರೆ ಬರುತ್ತದೆ.
 
ಮೀನ: ಸಾಮಾಜಿಕವಾಗಿ ಸ್ಥಾನ ಮಾನ ಹೆಚ್ಚುವುದು. ಆದರೆ ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ವ್ಯಾಪಾರ, ವಹಿವಾಟು ನಡೆುಸವವರಿಗೆ ಲಾಭವಾಗಲಿದೆ. ಮಕ್ಕಳ ಭವಿಷ್ಯದ ಬಗ್ಗೆ ಯೋಚನೆಯಾಗುವುದು.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಆಶ್ಲೇಷಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

news

ಪುಷ್ಯ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.