Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಭಾನುವಾರ, 7 ಜುಲೈ 2019 (09:02 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ನಿಮ್ಮ ಕೈ ಕೆಳಗೆ ಕೆಲಸ ಮಾಡುವ ನೌಕರರ ಸಹಾಯಕ್ಕೆ ಧಾವಿಸುವಿರಿ. ಕೌಟುಂಬಿಕವಾಗಿ ತಾಳ್ಮೆ ಮತ್ತು ಮೌನವಾಗಿರುವುದೇ ಲೇಸು. ಅನಗತ್ಯ ಮನಸ್ತಾಪ, ಸಂಘರ್ಷಗಳಿಗೆ ಎಡೆಮಾಡಿಕೊಡದಿರಿ.
 
ವೃಷಭ: ಗೃಹೋಪಯೋಗಿ ವಸ್ತುಗಳ ಖರೀದಿಗೆ ಹಣ ಖರ್ಚು ಮಾಡುವಿರಿ. ವಾಹನ ಖರೀದಿಯಿಂದ ನಷ್ಟ ಅನುಭವಿಸುವಿರಿ. ಮಕ್ಕಳಿಂದ ಸಂತಸ ಸಿಗುವುದು. ಅನಿರೀಕ್ಷಿತ ಅಪಘಾತಗಳಾಗುವ ಸಂಭವವಿದೆ. ಎಚ್ಚರಿಕೆ ಅಗತ್ಯ.
 
ಮಿಥುನ: ಈ ದಿನ ಯಾರಿಗೂ ಸಾಲ ಕೊಡಲು ಹೋಗಬೇಡಿ. ಅಂದುಕೊಂಡ ಕೆಲಸಗಳನ್ನು ಪೂರ್ತಿಗೊಳಿಸುವಿರಿ. ವ್ಯವಹಾರದಲ್ಲಿ ನಷ್ಟವಾಗುವ ಸಂಭವವಿದ್ದು, ಎಚ್ಚರಿಕೆ ಅಗತ್ಯ. ದೇವತಾ ಪ್ರಾರ್ಥನೆ ಮಾಡಿ.
 
ಕರ್ಕಟಕ: ಅವಿವಾಹಿತರಿಗೆ ಕಂಕಣ ಬಲ ಕೂಡಿಬರಲಿದೆ. ನೂತನ ದಂಪತಿಗಳಿಗೆ ಸಂತಾನ ಸೂಚಕ ಶುಭ ಫಲಗಳು ಗೋಚರವಾಗುವುದು. ಆರ್ಥಿಕವಾಗಿ ಸುಧಾರಣೆ ಕಂಡುಬರಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು.
 
ಸಿಂಹ: ಸಾಂಸಾರಿಕವಾಗಿ ಸಂಗಾತಿಯೊಂದಿಗಿನ ಮನಸ್ತಾಪಗಳು ದೂರವಾಗಿ ನೆಮ್ಮದಿಯ ವಾತಾವರಣ ನೆಲೆಸಲಿದೆ. ವ್ಯಾಪಾರಿ ವರ್ಗದವರಿಗೆ ಮುನ್ನಡೆಯಾಗುವುದು. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಗಮನಹರಿಸಬೇಕಾಗುತ್ತದೆ.
 
 
ಕನ್ಯಾ: ಅಪರಿಚಿತರನ್ನು ನಂಬಿ ಹೊಸ ವ್ಯವಹಾರಗಳಿಗೆ ಕೈ ಹಾಕಿದರೆ ವಂಚನೆಗೊಳಗಾಗುವ ಭೀತಿಯಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳು ಪ್ರಯತ್ನಬಲ ಮುಂದುವರಿಸಬೇಕು.
 
ತುಲಾ: ಮನೆಯಲ್ಲಿ ಶುಭ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತ ಖರ್ಚು ವೆಚ್ಚಗಳಿಗೆ ಸಿದ್ಧರಾಗಿ. ದುಡುಕು ಮಾತಿನಿಂದ ಸಂಬಂಧ ಹಾಳು ಮಾಡಿಕೊಳ್ಳಬೇಡಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗುವುದು.
 
ವೃಶ್ಚಿಕ: ಕೋಪದ ಕೈಗೆ ಬುದ್ಧಿ ಕೊಟ್ಟು ಆತುರದ ನಿರ್ಧಾರ ಕೈಗೊಳ್ಳುವಿರಿ. ದಾಂಪತ್ಯದಲ್ಲಿ ಮನಸ್ತಾಪವಾದೀತು. ಆರ್ಥಿಕವಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
 
ಧನು: ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ಅಲೆದಾಡಬೇಕಾದೀತು. ಕಾರ್ಯಕ್ಷೇತ್ರದಲ್ಲಿ ವಿಘ್ನಗಳಿದ್ದರೂ ಅಂತಿಮವಾಗಿ ಕಾರ್ಯ ನೆರವೇರುವುದು. ಮನೋ ಕಾಮನೆಗಳು ನಿಧಾನವಾಗಿ ಒಂದೊಂದೇ ಪೂರೈಸುವುದು.
 
ಮಕರ: ಪ್ರಯತ್ನಕ್ಕೆ ತಕ್ಕ ಫಲ ಸಿಕ್ಕೇ ಸಿಗುತ್ತದೆ. ನಿರಾಶೆ ಬೇಡ. ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನವಾಗಲಿದೆ. ಅವಿವಾಹಿತರಿಗೆ ವಿವಾಹ ಪ್ರಯತ್ನಕ್ಕೆ ಹಿನ್ನಡೆಯಾಗುವುದು. ಕುಲದೇವರ ಪ್ರಾರ್ಥನೆ ಮಾಡಿ.
 
ಕುಂಭ: ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡುವಿರಿ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗವಾದೀತು. ಆದರೆ ವಾತ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ದೂರ ಸಂಚಾರದಿಂದ ಕಾರ್ಯ ಸಾಧನೆಯಾಗಲಿದೆ.
 
ಮೀನ: ಋಣಾತ್ಮಕ ಚಿಂತನೆಗಳಿಂದ ಕಾರ್ಯಕ್ಷೇತ್ರದಲ್ಲಿ ಆಲಸ್ಯತನ ಕಂಡುಬರಲಿದೆ. ಮನೆ, ಆಸ್ತಿ ಖರೀದಿಗೆ ಚಿಂತನೆ ನಡೆಸುವಿರಿ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
ಇದರಲ್ಲಿ ಇನ್ನಷ್ಟು ಓದಿ :