ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು, ಬುಧವಾರ, 10 ಜುಲೈ 2019 (08:58 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


 
ಮೇಷ: ಕಾರ್ಯಕ್ಷೇತ್ರದಲ್ಲಿ ಅತೀವ ಒತ್ತಡವಿರಲಿದ್ದು, ಓಡಾಟ ನಡೆಸಬೇಕಾಗುತ್ತದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ಖುಷಿಯಾಗುವುದು. ಆರ್ಥಿಕವಾಗಿ ಖರ್ಚು ವೆಚ್ಚಗಳಿರುತ್ತವೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ವೃಷಭ: ಮನೆಗೆ ಅನಿರೀಕ್ಷಿತ ಅತಿಥಿಗಳ ಆಗಮನವಾಗಲಿದೆ. ಕೆಲಸ ಕಾರ್ಯಗಳಲ್ಲಿ ಪ್ರಗತಿ ಕಂಡುಬರುವುದು. ದೈವಾನುಗ್ರಹ ನಿಮ್ಮ ಮೇಲಿದ್ದು, ಆರ್ಥಿಕವಾಗಿಯೂ ಚೇತರಿಕೆ ಕಂಡುಬರುವುದು.
 
ಮಿಥುನ: ಹೊಸ ಕೆಲಸಗಳಿಗೆ ಕೈ ಹಾಕಿದರೆ ಜಯ ನಿಮ್ಮದಾಗುವುದು. ಆದರೆ ಕಠಿಣ ಪ್ರಯತ್ನ ಬಲ ಅಗತ್ಯ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಸಾಮಾಜಿಕವಾಗಿ ಗೌರವ ಸಂಪಾದಿಸಲಿದ್ದೀರಿ.
 
ಕರ್ಕಟಕ: ನಿಮ್ಮ ಮನೋಕಾಮನೆಗಳು ಪೂರ್ತಿಯಾಗಲಿದೆ. ಶುಭ ಮಂಗಲ ಕಾರ್ಯ ನೆರವೇರಿಸಲು ಓಡಾಟ ನಡೆಸಬೇಕಾಗುತ್ತದೆ. ನೀವು ಮಾಡುವ ಕೆಲಸದಿಂದ ನಿಮಗೆ ತೃಪ್ತಿ ಸಿಗಲಿದೆ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.
 
ಸಿಂಹ: ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಉನ್ನತಿ ಕಾಣುವರು. ಧನಾಮನವಾದಷ್ಟೇ ಖರ್ಚೂ ಇರಲಿದೆ. ಸಾಂಸಾರಿಕವಾಗಿ ಹೊಂದಾಣಿಕೆ, ತಾಳ್ಮೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.
 
 
ಕನ್ಯಾ: ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶ ಸಿಗುವುದು. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗುವುದು. ಉದ್ಯೋಗಿಗಳಿಗೆ ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರುವುದು.
 
ತುಲಾ: ಎಷ್ಟೋ ದಿನದಿಂದ ಬಾಕಿಯಿದ್ದ ಕುಲದೇವರ ಹರಕೆ ತೀರಿಸುವಿರಿ. ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಕಾರ್ಯಕ್ಷೇತ್ರದಲ್ಲಿ ಹಿತಶತ್ರುಗಳ ಕಾಟವಿರಲಿದೆ. ಎಚ್ಚರಿಕೆ ಅಗತ್ಯ. ದಿನದಂತ್ಯಕ್ಕೆ ಶುಭವಾಗುವುದು.
 
ವೃಶ್ಚಿಕ: ಯಾವುದೇ ಕೆಲಸ ಪ್ರಾರಂಭಿಸಬೇಕಾದರೂ ಆತ್ಮವಿಶ್ವಾಸದ ಕೊರತೆ ಕಂಡುಬರಬಹುದು. ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡದಿರಿ. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ಸಂಗಾತಿಯ ಸಲಹೆಗೆ ಕಿವಿಗೊಡಿ.
 
ಧನು: ಬಂಧು ಮಿತ್ರರ ಭೇಟಿಯಿಂದ ಮನಸ್ಸಿಗೆ ನೆಮ್ಮದಿಯಾಗುವುದು. ಮಕ್ಕಳಿಂದ ಶುಭ ವಾರ್ತೆ ಆಲಿಸುವಿರಿ. ವಿದ್ಯಾರ್ಥಿಗಳು ವಿದ್ಯಾಭ್ಯಾಸದಲ್ಲಿ ಪ್ರಗತಿ ಕಾಣುವರು. ಸಂಗಾತಿಯ ಇಷ್ಟಗಳನ್ನು ಪೂರ್ತಿ ಮಾಡಬೇಕಾಗುತ್ತದೆ.
 
ಮಕರ: ಸಾಮಾಜಿಕವಾಗಿ ನಿಮ್ಮ ಕೆಲಸಗಳು ಗುರುತಿಸಲ್ಪಡುವುದು. ಉತ್ತಮ ಸ್ಥಾನ ಮಾನ ಸಂಪಾದಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ಬಡ್ತಿ, ಮುನ್ನಡೆ ಯೋಗವಿದೆ. ದೇವತಾ ಪ್ರಾರ್ಥನೆಯಿಂದ ಮತ್ತಷ್ಟು ಶುಭ ಫಲ ನಿರೀಕ್ಷಿಸಬಹುದು.
 
ಕುಂಭ: ಹಳೆಯ ಕೌಟುಂಬಿಕ ಸಂಬಂಧಗಳು ಮತ್ತೆ ಕೂಡಿಕೊಳ್ಳಲಿದ್ದು, ಮನಸ್ಸಿಗೆ ಖುಷಿಯಾಗುವುದು. ವೃತ್ತಿರಂಗದಲ್ಲಿ ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ಮೀನ: ಉದ್ಯೋಗ ಕ್ಷೇತ್ರದಲ್ಲಿ ನೀವು ಎಷ್ಟೇ ಉತ್ತಮ ಕೆಲಸ ಮಾಡಿದರೂ ಮೇಲಧಿಕಾರಿಗಳಿಂದ ಕಿರಿ ಕಿರಿ ತಪ್ಪದು. ಟೀಕೆಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಕೌಟುಂಬಿಕವಾಗಿ ಸಂಗಾತಿಯ ಸಹಕಾರ ಸಿಕ್ಕಿ ಮನಸ್ಸಿಗೆ ನೆಮ್ಮದಿಯಾಗುವುದು.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಚಿತ್ತ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

news

ಹಸ್ತಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.