ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು, ಶುಕ್ರವಾರ, 12 ಜುಲೈ 2019 (08:43 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


 
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಕಾರ್ಯದೊತ್ತಡವಿರಲಿದೆ. ಆರ್ಥಿಕವಾಗಿ ಸಮಾಧಾನಕರ ದಿನ. ಅನಿರೀಕ್ಷಿತವಾಗಿ ಧನಾಗಮನವಾಗುವುದು. ಆರೋಗ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಿರಿ.
 
ವೃಷಭ: ಸಂಗಾತಿಯೊಂದಿಗೆ ಕೌಟುಂಬಿಕ ವಿಚಾರದಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗುವಿರಿ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ.
 
ಮಿಥುನ: ಅವಿವಾಹಿತರಿಗೆ ವಿವಾಹ ಭಾಗ್ಯ ಕೂಡಿಬರುವುದು. ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ವ್ಯಾಪಾರ ವ್ಯವಹಾರದಲ್ಲಿ ಹಣ ಹೂಡಿಕೆ ಮಾಡುವಿರಿ. ದೇವತಾ ಪ್ರಾರ್ಥನೆ ಮಾಡಿ.
 
ಕರ್ಕಟಕ: ಇಷ್ಟ ಮಿತ್ರರನ್ನು ಭೇಟಿಯಾಗಿ ಮನಸ್ಸಿಗೆ ಖುಷಿಯಾಗುವುದು. ಆದರೆ ಉದರ ಸಂಬಂಧೀ ಆರೋಗ್ಯ ಸಮಸ್ಯೆ ಕಂಡುಬರುವ ಸಾಧ್ಯತೆಯಿದೆ.  ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಅಗತ್ಯ. ಕಿರು ಸಂಚಾರ ಮಾಡುವಿರಿ.
 
ಸಿಂಹ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನಗಳು ಹೆಚ್ಚಾಗುವುದು. ಆದರೆ ಹಿತ ಶತ್ರುಗಳ ಬಗ್ಗೆ ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಹಳೆಯ ಬಾಕಿಗಳು ವಸೂಲಾಗಲಿವೆ. ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ.
 
 
ಕನ್ಯಾ: ಸಾಲ ಪಾವತಿ ಚಿಂತೆ ಕಾಡಲಿದೆ. ಹೊಸ ವ್ಯವಹಾರಗಳಿಗೆ ಕೈ ಹಾಕಲು ಹಣಕಾಸಿನ ಅಡಚಣೆ ಉಂಟಾಗಲಿದೆ. ಕೆಳ ಹಂತದ ನೌಕರರಿಗೆ ಬಡ್ತಿ ಯೋಗವಿದೆ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ.
 
ತುಲಾ: ಆಸ್ತಿ ವಿವಾದಗಳು ತಲೆದೋರಲಿದ್ದು, ಹಿರಿಯರು ಮಧ್ಯಸ್ಥಿಕೆ ವಹಿಸಿದರೆ ಒಳಿತು. ಸರಕಾರಿ ಕೆಲಸಗಳಲ್ಲಿ ಹಿನ್ನಡೆಯಾದೀತು. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆ ಬಂದೀತು. ಆರೋಗ್ಯದಲ್ಲಿ ಸುಧಾರಣೆಯಾದೀತು.
 
ವೃಶ್ಚಿಕ: ನೀವು ನಂಬಿರುವವರಿಂದ ವಿಶ್ವಾಸ ದ್ರೋಹವಾಗುವ ಸಾಧ್ಯತೆಯಿದೆ. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗವಾದೀತು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸುವಿರಿ.
 
ಧನು: ಗೃಹೋಪಯೋಗಿ ವಸ್ತುಗಳ ಖರೀದಿಗೆ ಹೆಚ್ಚಿನ ಧನವ್ಯಯವಾಗಲಿದೆ. ಸಂಗಾತಿಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಮಕ್ಕಳಿಂದ ಸಂತಸದ ವಾರ್ತೆ ಸಿಗುವುದು. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಹಿನ್ನಡೆಯಾಗಬಹುದು. ತಾಳ್ಮೆಯಿರಲಿ.
 
ಮಕರ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹಿನ್ನಡೆಯ ಭೀತಿಯಿದೆ. ವ್ಯಾಪಾರಿಗಳು ವ್ಯವಹಾರದಲ್ಲಿ ಆರ್ಥಿಕವಾಗಿ ಲಾಭ ಗಳಿಸುವರು. ಆದರೆ ಮಹಿಳೆಯರಿಂದ ವಂಚನೆಗೊಳಗಾಗುವ ಭೀತಿಯಿದೆ. ಎಚ್ಚರಿಕೆ ಅಗತ್ಯ.
 
ಕುಂಭ: ಕಾರ್ಯನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾದೀತು. ಚಾಡಿ ಮಾತುಗಳು ಕೇಳಿಬಂದರೂ ತಲೆಕೆಡಿಸಿಕೊಳ್ಳಬೇಡಿ. ಸಂಗಾತಿಯ ಸಹಕಾರ ಸಿಗುವುದು. ಉದ್ಯೋಗದಲ್ಲಿ ಬದಲಾವಣೆಯ ಯೋಗವಿದೆ.
 
ಮೀನ: ಹೊಸ ಕೆಲಸಗಳಿಗೆ ಕೈ ಹಾಕಲು ಆಲಸ್ಯತನ ಕಂಡುಬರಬಹುದು. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲಿತಾಂಶದಿಂದ ಸಂತಸವಾಗುವುದು. ಇಷ್ಟ ಮಿತ್ರರನ್ನು ಭೇಟಿಯಾಗುವಿರಿ. ಬಂಧು ಮಿತ್ರರ ಆಗಮನವಾಗಲಿದೆ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ವಿಶಾಖ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ದ್ವಾದಶ ರಾಶಿಗಳ ಫಲ ತಿಳಿಯಿರಿ

ಬೆಂಗಳೂರು: ದ್ವಾದಶ ರಾಶಿಗಳ ಇಂದಿನ ಫಲಾಫಲಗಳನ್ನು ತಿಳಿಯಲು ಇಲ್ಲಿ ಕ್ಲಿಕ್ ಮಾಡಿ.

news

ಸ್ವಾತಿ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.