ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವಿದ್ಯಾರ್ಥಿಗಳಿಗೆ ಎಷ್ಟೇ ಪ್ರಯತ್ನಪಟ್ಟರೂ ನಿರೀಕ್ಷೆಗೆ ತಕ್ಕ ಫಲಿತಾಂಶ ಸಿಗದೇ ನಿರಾಸೆಯಾಗಬಹುದು. ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಮುನ್ನಡೆ. ಮಾನಸಿಕವಾಗಿ ಅಸಮಾಧಾನಗಳು ಕಾಡಲಿವೆ.ವೃಷಭ: ಸರಕಾರಿ ಕೆಲಸಗಳಲ್ಲಿ ಜಯ ನಿಮ್ಮದಾಗುವುದು. ಆಸ್ತಿ ವ್ಯಾಜ್ಯಗಳು ನಿಮ್ಮ ಪರವಾಗಿ ಬರವುದು. ಸಾಮಾಜಿಕವಾಗಿ ಗೌರವ ಸಂಪಾದಿಸಲಿದ್ದೀರಿ. ಧನಾಗಮನ ಸಕಾಲ ಆಗುವುದರಿಂದ ಚಿಂತೆ ಬೇಡ.ಮಿಥುನ: ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಭಿನ್ನಾಭಿಪ್ರಾಯಗಳು ಮೂಡಿಬರಲಿದೆ. ವಾಹನ ಖರೀದಿಗೆ ಮನಸ್ಸು ಮಾಡುವಿರಿ. ಖರ್ಚು ವೆಚ್ಚಗಳಾಗಲಿವೆ, ಎಚ್ಚರಿಕೆ