ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು, ಭಾನುವಾರ, 14 ಜುಲೈ 2019 (09:01 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.


 
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಹೊಸ ದಾರಿಗಳು ಕಂಡುಬರಲಿದೆ. ರಾಜಕೀಯ ಸ್ಥಾನ ಮಾನಗಳು ಹೆಚ್ಚುವುದು. ಕುಟುಂಬದಲ್ಲಿ ಬಂಧು ಮಿತ್ರರ ಆಗಮನದಿಂದ ಸಂತಸವಾಗಲಿದೆ. ಆರೋಗ್ಯದಲ್ಲಿ ಸುಧಾರಣೆಯಾಗುವುದು.
 
ವೃಷಭ: ಆರ್ಥಿಕವಾಗಿ ಚೇತರಿಕೆ ಕಂಡುಬರುವುದು. ಇದರಿಂದ ಕೈ ಹಿಡಿದ ಕಾರ್ಯಗಳು ಸುಗಮವಾಗಿ ನೆರವೇರಲಿದೆ. ಧಾರ್ಮಿಕ ಕಾರ್ಯಗಳಿಂದ ಮನೆಯಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಡಬೇಕು.
 
ಮಿಥುನ: ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರುವುದು. ಆಸ್ತಿ, ಮನೆ ಖರೀದಿಗೆ ಚಿಂತನೆ ನಡೆಸುವಿರಿ. ವ್ಯವಹಾರಗಳಲ್ಲಿ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸುವುದು ಮುಖ್ಯ. ಸಂಚಾರದಲ್ಲಿ ಜಾಗ್ರತೆಯಿರಲಿ.
 
ಕರ್ಕಟಕ: ಆರ್ಥಿಕವಾಗಿ ಲಾಭ ಗಳಿಸುವುದರಿಂದ ಮಾನಸಿಕ ಚಿಂತೆಗಳು ದೂರವಾಗುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗಿ ಬರುವುದು. ನಿರುದ್ಯೋಗಿಗಳಿಗೆ ಹೊಸ ಉದ್ಯೋಗ ದಾರಿಗಳು ಕಂಡುಬರುವುದು.
 
ಸಿಂಹ: ಪ್ರಾಮಾಣಿಕವಾಗಿ ಮಾಡಿದ ಕೆಲಸಕ್ಕೆ ಉತ್ತಮ ಫಲಿತಾಂಶ ಪಡೆಯುವಿರಿ. ವ್ಯಾಪಾರಿಗಳು ವ್ಯವಹಾರದಲ್ಲಿ ಲಾಭ ಗಳಿಸುವರು. ಇಷ್ಟಮಿತ್ರರ ಆಗಮನದಿಂದ ಮನೆಯಲ್ಲಿ ಸಂತಸದ ವಾತಾವರಣವಿರಲಿದೆ.
 
 
ಕನ್ಯಾ: ನಿರುದ್ಯೋಗಿಗಳು ಪಾಲಿಗೆ ಬಂದಿದ್ದು ಪಂಚಾಮೃತ ಎಂದುಕೊಂಡು ಮುನ್ನಡೆಯಬೇಕಾಗುತ್ತದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆಯ ಕೊರತೆ ಎದುರಾಗುವುದು. ಆರೋಗ್ಯದ ಬಗ್ಗೆ ಕಾಳಜಿ ಅಗತ್ಯ.
 
ತುಲಾ: ಅವಿವಾಹಿತರಿಗೆ ಮನಸ್ಸಿಗೆ ಹಿಡಿಸಿದ ವೈವಾಹಿಕ ಸಂಬಂಧಗಳು ಕೂಡಿಬರಲಿದೆ. ಸ್ವ ವೃತ್ತಿಯವರು ಮುನ್ನಡೆ ಸಾಧಿಸಲಿದ್ದಾರೆ. ಧಾರ್ಮಿಕ ಕಾರ್ಯಗಳಿಗಾಗಿ ಧನವಿನಿಯೋಗ ಮಾಡಬೇಕಾಗುತ್ತದೆ.
 
ವೃಶ್ಚಿಕ: ಕೃಷಿಕರ ಬವಣೆಗಳು ನಿವಾರಣೆಯಾಗುವುದು. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರುವುದು. ಶುಭ ಮಂಗಲ ಕಾರ್ಯಗಳಿಗಾಗಿ ಸಿದ್ಧತೆ ನಡೆಸುವಿರಿ. ದೇವತಾ ಪ್ರಾರ್ಥನೆಯಿಂದ ಶುಭ ಫಲ.
 
ಧನು: ನೂತನ ದಂಪತಿಗಳಿಗೆ ಮಧುಚಂದ್ರದ ಭಾಗ್ಯ. ವಿದ್ಯಾರ್ಥಿಗಳು ಪರಿಶ್ರಮ ಪಟ್ಟರಷ್ಟೇ ಉತ್ತಮ ಫಲಿತಾಂಶ ಸಿಗುವುದು. ಸ್ಥಗಿತಗೊಂಡ ಕೆಲಸಗಳಿಗೆ ಮರುಚಾಲನೆ ನೀಡುವಿರಿ. ಬಂಧು ವರ್ಗದವರ ಚಾಡಿ ಮಾತುಗಳಿಗೆ ಕಿವಿಗೊಡಬೇಕಿಲ್ಲ.
 
ಮಕರ: ಸಂತಾನಾಪೇಕ್ಷಿತ ದಂಪತಿಗಳಿಗೆ ಶುಭ ಸೂಚಕ ಫಲಗಳಿವೆ. ಆರಂಭದಲ್ಲಿ ವಿಘ್ನಗಳಿದ್ದರೂ ಕಾರ್ಯ ಸಾಧನೆಗೆ ಅಡ್ಡಿಯಾಗದು. ವಿಪರೀತ ಇನ್ನೊಬ್ಬರಿಗೆ ನೆರವಾಗುವ ಬುದ್ಧಿ ತೋರಿದರೆ ವಂಚನೆಗೊಳಗಾಗುವ ಭೀತಿಯಿದೆ.
 
ಕುಂಭ: ಕಾರ್ಯಕ್ಷೇತ್ರದಲ್ಲಿ ಇನ್ನೇನು ಕೆಲಸ ಪೂರ್ತಿಯಾಗುತ್ತದೆ ಎನ್ನುವಾಗ ಅಡ್ಡಿ ಆತಂಕಗಳು ಎದುರಾಗಬಹುದು. ಕುಲದೇವರ ಪ್ರಾರ್ಥನೆ ಮಾಡುವುದು ಒಳಿತು. ಸಂಗಾತಿಯ ಸಹಕಾರ ಸಿಗುವುದು. ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
 
ಮೀನ: ಕಟ್ಟಪಟ್ಟು ಮಾಡಿದ ಕೆಲಸದ ಪ್ರತಿಫಲ ಅನುಭವಿಸುವ ಕಾಲವಿದು. ದೈವಾನುಕೂಲದಿಂದ ಮನೋಕಾಮನೆಗಳು ಪೂರ್ತಿಯಾಗುವುದು. ಆದರೆ ಖರ್ಚು ವೆಚ್ಚಗಳ ಬಗ್ಗೆ ಹಿಡಿತವಿರಲಿ. ಹಿರಿಯರನ್ನು ಗೌರವದಿಂದ ಕಾಣಿ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಜ್ಯೇಷ್ಠ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಅನುರಾಧ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.