ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು, ಸೋಮವಾರ, 22 ಜುಲೈ 2019 (08:30 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 


ಮೇಷ: ಕಾರ್ಯಕ್ಷೇತ್ರದಲ್ಲಿ ಅಧಿಕ ಕಾರ್ಯದೊತ್ತಡವಿರಲಿದ್ದು, ದೇಹಾಯಾಸವಾಗಲಿದೆ. ವಿದ್ಯಾರ್ಥಿಗಳಿಗೆ ನಿರೀಕ್ಷಿತ ಫಲ ಸಿಗುವುದು. ಸಂಗಾತಿಯ ಸಹಕಾರ ಮನಸ್ಸಿಗೆ ನೆಮ್ಮದಿ ನೀಡುವುದು. ದೇವತಾ ಪ್ರಾರ್ಥನೆ ಮಾಡಿ.
 
ವೃಷಭ: ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ಹಿರಿಯರೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಉದಾಸೀನ ಮಾಡಿದರೆ ಮೇಲಧಿಕಾರಿಗಳಿಂದ ಬೈಸಿಕೊಳ್ಳಬೇಕಾಗುತ್ತದೆ.
 
ಮಿಥುನ: ಶೀತ ಸಂಬಂಧೀ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಎದುರಾಗಬಹುದು. ಮನೆಯಲ್ಲಿ ಅನಿರೀಕ್ಷಿತವಾಗಿ ಬಂಧುಮಿತ್ರರ ಆಗಮನದಿಂದ ಸಂತಸದ ವಾತಾವರಣವಿರಲಿದೆ. ಖರ್ಚು ವೆಚ್ಚದ ಬಗ್ಗೆ ಹಿಡಿತವಿರಲಿ.
 
ಕರ್ಕಟಕ: ಪ್ರೀತಿ ಪಾತ್ರರ ಅಮೂಲ್ಯ ಸಲಹೆಗಳಿಗೆ ಕಿವಿಗೊಡಬೇಕಾಗುತ್ತದೆ. ಉದ್ಯೋಗ ಕ್ಷೇತ್ರದಲ್ಲಿ ಕೊಂಚ ಎಚ್ಚರ ತಪ್ಪಿದರೂ ದಂಡನೆಗೊಳಗಾಗಬೇಕಾಗುತ್ತದೆ. ದೂರ ಸಂಚಾರದಿಂದ ಕಾರ್ಯಪ್ರಾಪ್ತಿಯಾಗುವುದು.
 
ಸಿಂಹ: ಸಾಮಾಜಿಕವಾಗಿ ನಿಮ್ಮ ಮಾತುಗಳಿಗೆ ಬೆಲೆ ಸಿಗುವುದು. ಹೆಸರು ಕೀರ್ತಿ ಸಂಪಾದಿಸುವಿರಿ. ಸಂಗಾತಿಯ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ. ಆದಾಯವಿದ್ದಷ್ಟೇ ಖರ್ಚೂ ಕಂಡುಬರಲಿದೆ.
 
ಕನ್ಯಾ: ಸಾಲಗಾರರ ಕಾಟ ಮನಸ್ಸಿಗೆ ಹಿಂಸೆಯಾಗುವುದು. ಆದಾಯಕ್ಕೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಆಪ್ತ ಮಿತ್ರರಿಂದ ಸಹಾಯ ನಿರೀಕ್ಷಿಸಬಹುದು. ದುಡುಕಿನ ವರ್ತನೆಗೆ ಕಡಿವಾಣ ಹಾಕಿ.
 
ತುಲಾ: ಹೊಸ ಮನೆ, ವಾಹನ ಖರೀದಿಗೆ ಮುಂದಾಗುವಿರಿ. ನಿಮ್ಮ ಜೀವನಕ್ಕೆ ಹೊಸ ತಿರುವು ಸಿಗುವ ಘಟನೆಗಳು ನಡೆಯಲಿವೆ. ಸಂಗಾತಿಯ ಸಹಕಾರವಿರಲಿದೆ. ಬೇಡದ ಮಾತುಗಳಿಗೆ ಕಿವಿಗೊಡಬೇಡಿ. ಕುಲದೇವರ ಪ್ರಾರ್ಥನೆ ಮಾಡಿ.
 
ವೃಶ್ಚಿಕ: ವಾಣಿಜ್ಯೋದ್ಯಮಿಗಳಿಗೆ ಇಂದು ನಿವ್ವಳ ಲಾಭ ಸಿಗಲಿದೆ. ಕೆಳಹಂತದ ನೌಕರರಿಗೆ ಬಡ್ತಿ ಯೋಗವಿದೆ. ಮೇಲಧಿಕಾರಿಗಳೊಂದಿಗೆ ಹೊಂದಿಕೊಂಡು ಹೋಗಬೇಕಿದೆ. ಸಂಗಾತಿಯ ಇಷ್ಟಾರ್ಥಗಳನ್ನು ನೆರವೇರಿಸುವಿರಿ.
 
ಧನು: ನಿಮ್ಮ ಹಠದ ಮನೋಭಾವ ಸಂಗಾತಿಯ ಮನಸ್ಸಿಗೆ ಬೇಸರವುಂಟುಮಾಡಬಹುದು. ದುಡುಕಿನ ವರ್ತನೆ ಬೇಡ. ಆರೋಗ್ಯ ಕೈಕೊಡಬಹುದು. ಎಚ್ಚರಿಕೆ ಅಗತ್ಯ. ಆರ್ಥಿಕವಾಗಿ ಚಿಂತೆ ಮಾಡಬೇಕಿಲ್ಲ.
 
ಮಕರ: ಸಂತಾನ ಹೀನ ದಂಪತಿಗಳಿಗೆ ಶುಭ ಸೂಚಕ ಫಲಗಳಿವೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಕೆಲವೊಂದು ಅನಿರೀಕ್ಷಿತ ಖರ್ಚುಗಳು ಎದುರಾಗಬಹುದು. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
 
ಕುಂಭ: ಋಣಾತ್ಮಕ ಚಿಂತನೆಗಳಿಗೆ ಅವಕಾಶ ಮಾಡಿಕೊಡಬೇಡಿ. ಯಾರ ಮಾತಿಗೂ ಕಿವಿಗೊಡದೇ ನಿರ್ಧಾರ ತೆಗೆದುಕೊಂಡರೆ ಮುಂದೆ ತೊಂದರೆ ಅನುಭವಿಸಬೇಕಾದೀತು. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ಮುನ್ನಡೆಯಬೇಕಾಗುತ್ತದೆ.
 
ಮೀನ: ಪಾಲಿಗೆ ಬಂದಿದ್ದು ಪಂಚಾಮೃತ ಎಂದು ತಿಳಿದುಕೊಳ್ಳಬೇಕು. ನಿರುದ್ಯೋಗಿಗಳು ಕೈಗೆ ಸಿಕ್ಕ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬೇಕು. ಮನೆಯಲ್ಲಿ ನೆಮ್ಮದಿಯ ವಾತಾವರಣವಿರಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಪೂರ್ವಾಭದ್ರ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಶತಭಿಷಾ ನಕ್ಷತ್ರಕ್ಕೆ ಯಾವ ಗ್ರಹ ಅಧಿಪತಿ ಮತ್ತು ಅದಕ್ಕೆ ಪರಿಹಾರವೇನು?

ಬೆಂಗಳೂರು: ಪ್ರತೀ ನಕ್ಷತ್ರಕ್ಕೂ ಒಂದೊಂದು ಗ್ರಹಾಧಿಪತಿ ಇದ್ದಾರೆ. ಆಯಾ ಗ್ರಹಾಧಿಪತಿಗಳಿಗೆ ಅನುಸಾರವಾಗಿ ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.