ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ನಿಮ್ಮ ಬಹುದಿನಗಳ ಕನಸನ್ನು ನನಸು ಮಾಡಿಕೊಳ್ಳುವಿರಿ. ಆರೋಗ್ಯದ ಬಗ್ಗೆ ಉದಾಸೀನ ಬೇಡ. ಮಕ್ಕಳ ಬಗ್ಗೆ ಚಿಂತೆಯಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಸಮಾಧಾನಕರ ವಾತಾವರಣವಿರಲಿದೆ.ವೃಷಭ: ಆರ್ಥಿಕವಾಗಿ ಮುನ್ನಡೆಯಿದ್ದು, ಅರ್ಧಕ್ಕೆ ನಿಂತ ಯೋಜನೆಗಳನ್ನು ಪೂರ್ತಿ ಮಾಡುವಿರಿ. ದೇವತಾ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಅವಿವಾಹಿತರಿಗೆ ಕಂಕಣ ಭಾಗ್ಯ ಒದಗಿಬರಲಿದೆ. ಆರೋಗ್ಯದ ಬಗ್ಗೆ ಕಾಳಜಿವಹಿಸಿ.ಮಿಥುನ: ಸಾಮಾಜಿಕವಾಗಿ ನಿಮ್ಮ ಕೆಲಸಗಳಿಗೆ ಮನ್ನಣೆ ಸಿಗಲಿದೆ. ಆರ್ಥಿಕವಾಗಿ ಅಭಿವೃದ್ಧಿ ಇದ್ದರೂ