ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ:ಕೌಟುಂಬಿಕವಾಗಿ ಸಂಗಾತಿಯ ನಿರ್ಧಾರಗಳು ಹಿಡಿಸದೇ ಹೋಗಬಹುದು. ಇದರಿಂದ ಒಂದು ರೀತಿಯ ಚಿಂತೆ, ಬೇಸರ ಕಾಡುವುದು.ವ್ಯಾಪಾರಿಗಳಿಗೆ ನಿವ್ವಳ ಲಾಭ ಸಿಗಲಿದೆ. ಸರಕಾರಿ ಅಧಿಕಾರಿಗಳಿಗೆ ವರ್ಗಾವಣೆ ಭೀತಿಯಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ಮನೆಯಲ್ಲಿ ಶಾಂತಿಯುತ ವಾತಾವರಣವಿರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಸಂಗಾತಿಯ ಮನೋಕಾಮನೆಗಳನ್ನು ಪೂರೈಸುವಿರಿ. ವಾಹನ ಚಾಲಕರು ಎಚ್ಚರವಾಗಿರಬೇಕು.ಮಿಥುನ: ನಾನಾ ಮೂಲಗಳಿಂದ ಧನಾಗಮನವಾಗಲಿದ್ದು, ಅಂದುಕೊಂಡ ಕಾರ್ಯಗಳನ್ನು ಪೂರ್ತಿ