ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸ್ವಂತ ನಿರ್ಧಾರದಿಂದ ಮುಂದುವರಿಯಬೇಕಾದ ಕಾಲವಿದು. ವ್ಯಾಪಾರ ವ್ಯವಹಾರದಲ್ಲಿ ಕೊಂಚ ಹಿನ್ನಡೆಯಾಗಬಹುದು. ಎಚ್ಚರಿಕೆಯಿಂದಿರುವುದು ಉತ್ತಮ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಮುನ್ನಡೆಯಿರಲಿದೆ. ಆರೋಗ್ಯದಲ್ಲಿ ಹೊಸ ಸಮಸ್ಯೆಗಳು ಚಿಂತೆಗೆ ಕಾರಣವಾಗುವುದು.ವೃಷಭ: ಹಣಕಾಸಿನ ವಿಚಾರದಲ್ಲಿ ಅತೀವ ಕಾಳಜಿ ವಹಿಸಿ. ವಿಪರೀತ ಖರ್ಚುಗಳಿಗೆ ಕಡಿವಾಣ ಹಾಕಬೇಕು. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಉತ್ತಮ ಸಮಯ ಕಳೆಯುವಿರಿ. ವಿದ್ಯಾರ್ಥಿಗಳಿಗೆ ಉತ್ತಮ ಫಲಿತಾಂಶ ಸಿಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.ಮಿಥುನ: ವಿವೇಚನೆಯಿಂದ