ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಕಾರ್ಯ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಗೆ ಕೊಂಚ ಸಮಾಧಾನಕರ ದಿನ. ಯಶಸ್ಸು ನಿಮ್ಮ ಬೆನ್ನ ಹಿಂದೆಯೇ ಇರುತ್ತದೆ. ಅನಗತ್ಯ ಚಿಂತನೆಗಳಿಗೆ ಕಡಿವಾಣ ಹಾಕಿ. ನಿರುದ್ಯೋಗಿಗಳಿಗೆ ಕೆಲಸದ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಆರೋಗ್ಯದಲ್ಲಿ ಕಾಳಜಿಯಿರಲಿ.ವೃಷಭ: ಆರ್ಥಿಕವಾಗಿ ಹಣಕಾಸಿಗೆ ಯಾವುದೇ ತೊಂದರೆಯಾಗದು. ಅಂದುಕೊಂಡ ಕೆಲಸ ಕಾರ್ಯಗಳನ್ನು ನೆರವೇರಿಸುವಿರಿ. ಮಕ್ಕಳ ವಿಚಾರದಲ್ಲಿ ಅಭಿವೃದ್ಧಿ ತೋರಿಬಂದು ಸಂತಸವಾಗುವುದು. ಮಹಿಳೆಯರಿಗೆ ಉದ್ಯೋಗದಲ್ಲಿ ವರ್ಗಾವಣೆ ಸಾಧ್ಯತೆ. ದಿನದಂತ್ಯಕ್ಕೆ ಶುಭ