ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಪ್ರೀತಿ ಪಾತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗುವುದು. ಹಾಗಿದ್ದರೂ ಏನೋ ಒಂದು ರೀತಿಯ ಚಿಂತೆ ಮನಸ್ಸು ಕೊರೆಯುತ್ತದೆ. ಆರ್ಥಿಕವಾಗಿ ಖರ್ಚು ವೆಚ್ಚದ ಬಗ್ಗೆ ನಿಗಾ ಇರಲಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ದಿನದಂತ್ಯಕ್ಕೆ ಸಂತಸ.ವೃಷಭ: ಉದ್ದೇಶಿತ ಕೆಲಸಗಳನ್ನು ನೆರವೇರಿಸಲು ವಿಘ್ನಗಳನ್ನು ಎದುರಿಸಿ ನಿಲ್ಲಬೇಕಾಗುತ್ತದೆ. ಆತ್ಮಸ್ಥೈರ್ಯದಿಂದ ಮುನ್ನಡೆಯಿರಿ. ಕಷ್ಟದ ಸಂದರ್ಭದಲ್ಲಿ ಮಿತ್ರರ ಸಹಾಯ ದೊರಕಲಿದೆ. ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಸ್ಥಾನ ಮಾನದ