ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು, ಶುಕ್ರವಾರ, 11 ಅಕ್ಟೋಬರ್ 2019 (09:10 IST)

ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 


ಮೇಷ: ವ್ಯಾಪಾರ ವ್ಯವಹಾರದಲ್ಲಿ ಪೈಪೋಟಿ ಅನುಭವಕ್ಕೆ ಬರುವುದು. ದಂಪತಿಗಳ ನಡುವೆ ಹೊಂದಾಣಿಕೆ ಕೊರತೆ ಉಂಟಾಗಬಹುದು. ತಾಳ್ಮೆಯಿಂದ ನಡೆದುಕೊಳ್ಳಬೇಕು. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆರೋಗ್ಯದಲ್ಲಿ ಸುಧಾರಣೆಯಾಗುವುದು.
 
ವೃಷಭ: ಕಾರ್ಯರಂಗದಲ್ಲಿ ಕ್ರಿಯಾಶೀಲತೆ ಉಪಯೋಗಕ್ಕೆ ಬರುವುದು. ನಿಮ್ಮ ಉದ್ದೇಶಿತ ಕಾರ್ಯಗಳು ಸುಗಮವಾಗಿ ನೆರವೇರುವುದು. ದೇಹಾರೋಗ್ಯದಲ್ಲಿ ಏರುಪೇರಾಗದಂತೆ ಎಚ್ಚರಿಕೆ ವಹಿಸಿ. ನಿರುದ್ಯೋಗಿಗಳು ಸರ್ಕಾರಿ ಉದ್ಯೋಗಕ್ಕಾಗಿ ನಡೆಸುವ ಪ್ರಯತ್ನದಲ್ಲಿ ಮುನ್ನಡೆ ಸಿಗುವುದು.
 
ಮಿಥುನ: ಮೇಲ್ವರ್ಗದ  ಅಧಿಕಾರಿಗಳಿಗೆ ಉದ್ಯೋಗದಲ್ಲಿ ತೊಂದರೆ ತಪ್ಪಿದ್ದಲ್ಲ. ವಿದ್ಯಾರ್ಥಿಗಳಿಗೆ ನಿರೀಕ್ಷೆಗೆ ತಕ್ಕ ಫಲಿತಾಂಶ ಸಿಗಲಿದೆ. ಸಾಂಸಾರಿಕವಾಗಿ ಹೊಂದಾಣಿಕೆಯ ಸ್ವಭಾವ ಬೆಳೆಸಿಕೊಳ್ಳಿ. ಶುಭ ಮಂಗಲ ಕಾರ್ಯದಲ್ಲಿ ಭಾಗಿಯಾಗುವಿರಿ. ದಿನದಂತ್ಯಕ್ಕೆ ಶುಭ ಸುದ್ದಿ.
 
ಕರ್ಕಟಕ: ದೂರ ಸಂಚಾರದಿಂದ ಕಾರ್ಯಸಿದ್ಧಿ. ಆದರೆ ಪ್ರಯಾಣದಲ್ಲಿ ಎಚ್ಚರಿಕೆ ಅಗತ್ಯ. ಹಿತಶತ್ರುಗಳ ಬೆನ್ನ ಹಿಂದೆಯೇ ಇರುತ್ತಾರೆ. ಪಾಲು ಬಂಡವಾಳ ಹೂಡಿಕೆಯಲ್ಲಿ ಎಚ್ಚರಿಕೆಯಿಂದಿರಿ. ನಿಮ್ಮ ಕ್ರಿಯಾಶೀಲತೆಗೆ ಮನ್ನಣೆ ಸಿಗಲಿದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ಸಿಂಹ: ದೈಹಿಕ ಆರೋಗ್ಯದಲ್ಲಿ ಸುಧಾರಣೆಯಾದರೂ ಮಾನಸಿಕವಾಗಿ ಚಿಂತೆ ಕಾಡಲಿದೆ. ಅರ್ಧಕ್ಕೇ ಸ್ಥಗಿತಗೊಂಡ ಕೆಲಸಗಳಿಗೆ ಚಾಲನೆ ಸಿಗಲಿದೆ. ಕಾರ್ಮಿಕ ವರ್ಗದವರಿಗೆ ಕಿರಿ ಕಿರಿ ತಪ್ಪದು. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು.
 
 
ಕನ್ಯಾ: ಉದ್ಯೋಗದಲ್ಲಿ ಪರಸ್ಪರ ಸಹಕಾರವಿದ್ದರೆ ಮುನ್ನಡೆ ಸಿಗುವುದು. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ನಿಮ್ಮ ಪರವಾದ ತೀರ್ಪು ಸಿಗಲಿದೆ. ಆಸ್ತಿ, ಮನೆ ಖರೀದಿಗೆ ಇದು ಸಕಾಲ. ಪರಿಶ್ರಮಕ್ಕೆ ತಕ್ಕ ಫಲ ಸಿಗುವುದು. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.
 
ತುಲಾ: ಅನವಶ್ಯಕವಾಗಿ ವಾದ ವಿವಾದಗಳಲ್ಲಿ ಮೂಗು ತೂರಿಸಲು ಹೋದರೆ ಮಾನ ಹಾನಿಗೆ ಗುರಿಯಾಗುವಿರಿ. ಕಾರ್ಯರಂಗದಲ್ಲಿ ಕ್ರಿಯಾಶೀಲತೆ ವ್ಯಕ್ತವಾಗುವುದು. ಗೃಹೋಪಯೋಗಿ ವಸ್ತುಗಳಿಗಾಗಿ ಧನವ್ಯಯವಾಗಲಿದೆ. ದಾಂಪತ್ಯದಲ್ಲಿ ಸುಖ ಸಮೃದ್ಧಿ ಇರಲಿದೆ.
 
ವೃಶ್ಚಿಕ: ಮಕ್ಕಳ ವಿಚಾರವಾಗಿ ಚಿಂತೆಗೀಡಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ ಸಾಧಿಸುವಿರಿ. ಕುಟುಂಬ ವರ್ಗದವರಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿವಹಿಸಿ. ಸಂಗಾತಿಯ ಮಾತುಗಳಿಗೆ ಕಿವಿಗೊಡಿ. ನಿರೀಕ್ಷೆಯಂತೇ ಕಾರ್ಯಗಳು ನಡೆಯಲಿವೆ.
 
ಧನು: ಆದಾಯದ ಮೂಲಗಳನ್ನು ಹೆಚ್ಚಿಸಲು ನಾನಾ ಮಾರ್ಗಗಳನ್ನು ಹುಡುಕುವಿರಿ. ಸಾಂಸಾರಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳು ದೂರವಾಗಲಿದೆ. ವಿವಾಹ ಪ್ರಯತ್ನಗಳಿಗೆ ಕೆಲವು ಅಡ್ಡಿ ಆತಂಕಗಳು ಎದುರಾಗಬಹುದು. ಚಾಡಿ ಮಾತುಗಳನ್ನು ಅಲಕ್ಷಿಸಿ.
 
ಮಕರ: ಆಸ್ತಿ ವ್ಯವಹಾರಗಳಲ್ಲಿ  ಜಯ ನಿಮ್ಮದಾಗುವುದು. ಆದರೆ ವಂಚನೆಗೊಳಗಾದಂತೆ ಎಚ್ಚರಿಕೆ ವಹಿಸಿ. ಮಾನಸಿಕವಾಗಿ ಚಿತ್ತ ಚಾಂಚಲ್ಯತೆಯಿಂದ ನಿರ್ಧಾರ ಕೈಗೊಳ್ಳುವಲ್ಲಿ ಎಡವಲಿದ್ದೀರಿ. ಸಂಗಾತಿಯ ಸಲಹೆಗಳು ಉಪಯೋಗಕ್ಕೆ ಬರಲಿವೆ. ದಿನದಂತ್ಯಕ್ಕೆ ಶುಭ ಸುದ್ದಿ.
 
ಕುಂಭ: ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಎದುರಾಗಬಹುದು. ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ, ಮುನ್ನಡೆ ಯೋಗವಿದೆ. ಆರೋಗ್ಯದಲ್ಲಿ ಸುಧಾರಣೆಯಾಗಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಾಭವಾಗಲಿದೆ.
 
ಮೀನ: ನಿರುದ್ಯೋಗಿಗಳಿಗೆ ಉದ್ಯೋಗ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ವಿದೇಶ ಯಾನ ಸಾಧ್ಯತೆಯಿದೆ. ಕಷ್ಟದ ಸಂದರ್ಭದಲ್ಲಿ ಮಿತ್ರರ ನೆರವು ಸಿಗಲಿದೆ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು ಮನಸ್ಸಿಗೆ ಸಂತಸವಾಗುವುದು.ಇದರಲ್ಲಿ ಇನ್ನಷ್ಟು ಓದಿ :  

ಜ್ಯೋತಿಷ್ಯ ಲೇಖನ

news

ಗ್ರಹಗಳ ಸ್ಥಾನಕ್ಕನುಗುಣವಾಗಿ ನಿಮ್ಮ ಮಾತಿನ ಗುಣ ಹೇಗಿದೆ ತಿಳಿಯಿರಿ!

ಬೆಂಗಳೂರು: ಮಾತು ಆಡಿದರೆ ಹೋಯಿತು, ಮುತ್ತ ಒಡೆದರೆ ಹೋಯಿತು ಎಂಬ ಮಾತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

news

ಗ್ರಹಗಳ ಸ್ಥಾನಕ್ಕನುಗುಣವಾಗಿ ನಿಮ್ಮ ಮಾತಿನ ಗುಣ ಹೇಗಿದೆ ತಿಳಿಯಿರಿ!

ಬೆಂಗಳೂರು: ಮಾತು ಆಡಿದರೆ ಹೋಯಿತು, ಮುತ್ತ ಒಡೆದರೆ ಹೋಯಿತು ಎಂಬ ಮಾತಿದೆ. ವ್ಯಕ್ತಿಯ ವ್ಯಕ್ತಿತ್ವವನ್ನು ...

news

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.