ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕವಾಗಿ ಬಾಕಿ ಹಣ ಪಾವತಿ ಚಿಂತೆ ಕಾಡಲಿದೆ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗುವುದು. ಸ್ವ ವ್ಯವಹಾರ ಮಾಡುವವರಿಗೆ ಉನ್ನತಿಯ ಯೋಗವಿದೆ. ಸಂಗಾತಿಯೊಂದಿಗೆ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ.ವೃಷಭ: ಚಿಂತಿತ ಕಾರ್ಯಗಳು ಅಡೆತಡೆಗಳಿದ್ದರೂ ಅಂತಿಮವಾಗಿ ನೀವಂದುಕೊಡಂತೆ ನೆರವೇರುವುದು. ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟುಗಳು ದೂರವಾಗುವುದು. ಕೌಟುಂಬಿಕವಾಗಿ ಹೆಚ್ಚಿನ ಜವಾಬ್ಧಾರಿಗಳನ್ನು ಹೊರಬೇಕಾಗುತ್ತದೆ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಮುನ್ನಡೆ, ಬಡ್ತಿ ಯೋಗವಿದೆ.