ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ಬಿಡುವಿದ್ದರೂ ಗೃಹ ಸಂಬಂಧೀ ಕೆಲಸಗಳಲ್ಲಿ ಅಧಿಕ ಕಾರ್ಯದೊತ್ತಡದಿಂದ ದೇಹ ಹೈರಾಣಾಗವುದು. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಆರ್ಥಿಕವಾಗಿ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕುವುದು ಅಗತ್ಯ. ಮಕ್ಕಳ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.ವೃಷಭ: ಆರ್ಥಿಕವಾಗಿ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ಅಪರಿಚಿತರನ್ನು ನಂಬಿ ಹೂಡಿಕೆ ಮಾಡಲು ಹೋಗಬೇಡಿ. ಕಾರ್ಮಿಕ ವರ್ಗದವರಿಗೆ ನೆಮ್ಮದಿಯಿರಲಿದೆ. ಕೌಟುಂಬಿಕವಾಗಿ ಬಂಧು ಮಿತ್ರರ ಆಗಮನಾಗಲಿದೆ. ಕಿರು