ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರ ವ್ಯವಹಾರದಲ್ಲಿ ಲಾಭ ಕಂಡುಬರಲಿದೆ. ಆರ್ಥಿಕವಾಗಿ ಹಣಕಾಸಿಗೆ ಕೊರತೆಯಿರದು. ಆದರೆ ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹ ಹೈರಾಣಾಗುವುದು. ಕೌಟುಂಬಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ನಡೆಸಬೇಕಾಗುತ್ತದೆ.ವೃಷಭ: ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಪ್ರಗತಿ ಕಂಡುಬರಲಿದೆ. ಶೈಕ್ಷಣಿಕ ರಂಗದಲ್ಲಿರುವವರಿಗೆ ಮುನ್ನಡೆ. ನಿರುದ್ಯೋಗಿಗಳಿಗೆ ಉದ್ಯೋಗ ಬೇಟೆಗಾಗಿ ದೂರ ಸಂಚಾರ ಮಾಡಬೇಕಾಗುತ್ತದೆ. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿಯಿರಲಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.ಮಿಥುನ: ಬೆನ್ನ ಹಿಂದೆ ಚೂರಿ ಹಾಕುವ