ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಎಷ್ಟೋ ದಿನಗಳಿಂದ ಕಾಡುತ್ತಿದ್ದ ಸಮಸ್ಯೆಯೊಂದಕ್ಕೆ ಪರಿಹಾರ ಸಿಗಲಿದೆ. ಮನಸ್ಸಿಗೆ ಸಂತೋಷ ಕೊಡುವ ಕೆಲಸ ಮಾಡಲಿದ್ದೀರಿ. ಧಾರ್ಮಿಕ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಕಾರ್ಮಿಕ ವರ್ಗದವರಿಗೆ ಉತ್ತಮ ಉದ್ಯೋಗಾವಕಾಶಗಳು ಲಭಿಸಲಿವೆ.ವೃಷಭ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳ ಸಿದ್ಧತೆಗಾಗಿ ಓಡಾಟವಿರುತ್ತದೆ. ಮಹಿಳೆಯರಿಗೆ ಆರೋಗ್ಯದಲ್ಲಿ ಏರುಪೇರಾಗಬಹುದು. ಕಾಳಜಿ ಅಗತ್ಯ. ಹಿರಿಯರ ಪುಣ್ಯ ಕ್ಷೇತ್ರ ಸಂದರ್ಶನಕ್ಕೆ ಏರ್ಪಾಟು ಮಾಡುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.ಮಿಥುನ: ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆಯ