ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ವ್ಯಾಪಾರ, ವ್ಯವಹಾರದಲ್ಲಿ ಆದಾಯ ದ್ವಿಗುಣಗೊಳ್ಳಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಉದ್ಯೋಗದಲ್ಲಿ ಕಾರ್ಯದೊತ್ತಡ, ಕಿರಿ ಕಿರಿ ತಪ್ಪದು. ಸಾಂಸಾರಿಕವಾಗಿ ಸಂಗಾತಿಯ ಅಸಮಾಧಾನಕ್ಕೆ ಗುರಿಯಾಗಬೇಕಾಗಬಹುದು. ತಾಳ್ಮೆಯಿಂದಿರಿ.ವೃಷಭ: ಅವಿವಾಹಿತರಿಗೆ ಶೀಘ್ರವೇ ಕಲ್ಯಾಣ ಭಾಗ್ಯವಿದೆ. ಪ್ರೇಮಿಗಳಿಗೆ ಮನೆಯವರಿಂದ ವಿರೋಧ ವ್ಯಕ್ತವಾಗಬಹುದು. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಪರಿಶ್ರಮಕ್ಕೆ ತಕ್ಕ ಫಲ ಪಡೆಯುವಿರಿ. ಸಂಗಾತಿಗೆ ಉಡುಗೊರೆ ನೀಡುವಿರಿ.ಮಿಥುನ: ಆರ್ಥಿಕವಾಗಿ ಹಣಕಾಸಿನ ಮುಗ್ಗಟ್ಟು