Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಭಾನುವಾರ, 12 ಜನವರಿ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಗೃಹಸಂಬಂಧೀ ಕೆಲಸಗಳಲ್ಲಿ ದೇಹಾಯಾಸವಾಗಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ. ನಿರ್ಧಾರ ಕೈಗೊಳ್ಳುವಾಗ ಮಾನಸಿಕವಾಗಿ ಗೊಂದಲಗಳು ಕಾಡಲಿವೆ. ಸಂಗಾತಿಯ ಸಲಹೆಗೆ ಕಿವಿಗೊಡುವುದು ಉತ್ತಮ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.
 
ವೃಷಭ: ವೃತ್ತಿರಂಗದಲ್ಲಿ ಬರುವ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಯತ್ನಿಸುವಿರಿ. ಅನವಶ್ಯಕ ವಾದ ವಿವಾದಗಳಿಗೆ ಎಡೆ ಮಾಡಿಕೊಡದಿರಿ. ಅನಿರೀಕ್ಷಿತ ದೂರ ಪ್ರಯಾಣ ಮಾಡಬೇಕಾಗುತ್ತದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗದ ಲಾಭವಾಗಲಿದೆ.
 
ಮಿಥುನ: ಎಲ್ಲರೂ ಏನೋ ಒಂದು ನಿರ್ಧಾರಕ್ಕೆ ಬಂದರೆ ನಿಮ್ಮದು ಬೇರೆಯೇ ದಾರಿ ಎನ್ನುವ ಯೋಚನೆಯಲ್ಲಿರುತ್ತೀರಿ. ಇದರಿಂದ ಪ್ರೀತಿ ಪಾತ್ರರ ಮನಸ್ಸಿಗೆ ಬೇಸರವಾಗಬಹುದು. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮ ಪಟ್ಟರೆ ಮಾತ್ರ ಯಶಸ್ಸು.
 
ಕರ್ಕಟಕ: ಸಾಂಸಾರಿಕವಾಗಿ ನಿಮ್ಮ ದುಡುಕು ಮಾತಿನಿಂದ ಸಂಗಾತಿಯೊಂದಿಗೆ ಮನಸ್ತಾಪವಾಗುವ ಸಾಧ‍್ಯತೆಯಿದೆ. ಆಪ್ತರೊಂದಿಗೆ ಭಿನ್ನಾಭಿಪ್ರಾಯಗಳಾಗದಂತೆ ಎಚ್ಚರಿಕೆ ವಹಿಸಿ. ಆರ್ಥಿಕವಾಗಿ ಆದಾಯ ವೃದ್ಧಿಗೆ ನಾನಾ ಮಾರ್ಗ ಕಂಡುಕೊಳ್ಳುವಿರಿ.
 
ಸಿಂಹ: ಆರ್ಥಿಕವಾಗಿ ಇದುವರೆಗೆ ಇದ್ದ ಸಮಸ್ಯೆಗಳು ನಿವಾರಣೆಯಾಗಿ ಹಂತ ಹಂತವಾಗಿ ಅಭಿವೃದ್ಧಿ ತೋರಿಬರಲಿದೆ. ಸಾಮಾಜಿಕವಾಗಿ ನಿಮ್ಮ ಕೀರ್ತಿ ಹೆಚ್ಚಲಿದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವಿರಿ. ಮನಸ್ಸಿನ ಮಾತಿನಂತೆ ನಡೆದುಕೊಳ್ಳಿ.
 
ಕನ್ಯಾ: ಸಾಂಸಾರಿಕವಾಗಿ ಸಂತೋಷದ ದಿನವಿದು. ಮಕ್ಕಳೊಂದಿಗೆ ಉತ್ತಮ ಸಮಯ ಕಳೆಯುವಿರಿ. ಆದರೆ ಆರ್ಥಿಕವಾಗಿ ಖರ್ಚು ವೆಚ್ಚಗಳ ಬಗ್ಗೆ ಕೊಂಚ ನಿಗಾ ವಹಿಸಿದರೆ ಉತ್ತಮ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಇಷ್ಟ ಭೋಜನ ಮಾಡುವಿರಿ.
 
ತುಲಾ: ಅನಗತ್ಯ ಚಿಂತೆಗಳಿಗೆ ಕಡಿವಾಣ ಹಾಕುವುದು ಒಳಿತು. ಅನ್ಯರ ಚಾಡಿ ಮಾತುಗಳಿಗೆ ಕಿವಿಗೊಡದೇ ನಿಮ್ಮ ನಿರ್ಧಾರದಂತೆ ಕೆಲಸ ಕಾರ್ಯಗಳಲ್ಲಿ ಮುಂದುವರಿಯಿರಿ. ಹಿರಿಯರಿಂದ ಬರುವ ಉಡುಗೊರೆ ಸ್ವೀಕರಿಸಲು ಸಿದ್ಧರಾಗಿ. ದೇವತಾ ಪ್ರಾರ್ಥನೆ ಮರೆಯದಿರಿ.
 
ವೃಶ್ಚಿಕ: ವೃತ್ತಿ ಜೀವನದಲ್ಲಿ ವಿನಾಕಾರಣ ಅಪವಾದಕ್ಕೆ ಗುರಿಯಾಗಬೇಕಾದೀತು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರ. ವಿದ್ಯಾರ್ಥಿಗಳಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ಸಾಲಗಳು ಮರುಪಾವತಿಯಾಗಲಿದ್ದು, ಆರ್ಥಿಕ ಸಮಸ್ಯೆಗಳು ನಿವಾರಣೆಯಾಗಲಿವೆ.
 
ಧನು: ಸ್ನೇಹಿತರಿಂದ ಸಕಾಲದಲ್ಲಿ ಬರುವ ಉಪಯುಕ್ತ ಸಲಹೆಗಳು ನೆರವಿಗೆ ಬರಲಿವೆ. ಸಹೋದರರೊಂದಿಗೆ ಭಿನ್ನಾಭಿಪ್ರಾಯಗಳು ಮೂಡಬಹುದು. ಬಹುದಿನಗಳಿಂದ ಅಂದುಕೊಂಡಿದ್ದ ಕೆಲಸಗಳಿಗೆ ಚಾಲನೆ ನೀಡುವಿರಿ. ಮಿತ್ರರ ಭೇಟಿಯಿಂದ ಸಂತಸವಾಗಲಿದೆ.
 
ಮಕರ: ಮನೆಯಲ್ಲಿ ಶುಭ ಮಂಗಲ ಕಾರ್ಯ ನಡೆಸಲು ಸಿದ್ಧತೆ ನಡೆಸಲಿದ್ದೀರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು ಸಂತಸವಾಗಲಿದೆ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಧನ ವ್ಯಯವಾಗಲಿದೆ. ಆರೋಗ್ಯದಲ್ಲಿ ಏರುಪೇರು ಸಾಧ‍್ಯತೆ.
 
ಕುಂಭ: ಪ್ರಮುಖ ವಿಚಾರಗಳಲ್ಲಿ ನಿರ್ಧಾರ ತೆಗೆದುಕೊಳ್ಳುವಾಗ ಸಂಗಾತಿಯ ಸಲಹೆ ಗಣನೆಗೆ ತೆಗೆದುಕೊಳ್ಳಿ. ವೃತ್ತಿರಂಗದಲ್ಲಿ ಸಂಯಮದಿಂದ ನಡೆದುಕೊಳ್ಳುವುದು ಮುಖ್ಯ. ಮಹಿಳೆಯರಿಗೆ ಇಷ್ಟ ವಸ್ತು ಖರೀದಿ ಯೋಗವಿದೆ. ಪ್ರೇಮಿಗಳ ಪಾಲಿಗೆ ಇಂದು ಶುಭ ದಿನ.
 
ಮೀನ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕೆ ಅವಕಾಶಗಳು ಒದಗಿಬರಲಿವೆ. ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರ ಅಸಮಾಧಾನಕ್ಕೆ ಗುರಿಯಾಗಬಹುದು. ಯಂತ್ರೋಪಕರಣಗಳ ಕೆಲಸ ಮಾಡುವವರಿಗೆ ಮುನ್ನಡೆ ಸಿಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
ಇದರಲ್ಲಿ ಇನ್ನಷ್ಟು ಓದಿ :