Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಸೋಮವಾರ, 13 ಜನವರಿ 2020 (08:44 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬರುವಂತಹ ಸಮಸ್ಯೆಗಳನ್ನು ಸುಲಭವಾಗಿ ನಿಭಾಯಿಸುವಿರಿ. ಆದರೆ ಸಾಂಸಾರಿಕವಾಗಿ ಭಿನ್ನಾಭಿಪ್ರಾಯಗಳಿಂದಾಗಿ ಮನಸ್ಸು ಹೈರಾಣಾಗುವುದು. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದ ಅಗತ್ಯವಿದೆ. ದೇವತಾ ಪ್ರಾರ್ಥನೆಯಿಂದ ನೆಮ್ಮದಿ.
 
ವೃಷಭ: ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆಯಿದ್ದರೂ ಸ್ವಲ್ಪದರಲ್ಲೇ ಸಂಬಂಧಗಳು ಕೈ ತಪ್ಪಿ ಹೋಗಿ ಮನಸ್ಸಿಗೆ ಬೇಸರವಾಗಬಹುದು. ನಿರುದ್ಯೋಗಿಗಳಿಗೆ ಅನಿರೀಕ್ಷಿತ ಅವಕಾಶಗಳು ಒದಗಿಬರಲಿವೆ. ಜಾಣತನದಿಂದ ಬಳಸಿಕೊಳ್ಳಬೇಕು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ಮಿಥುನ: ಮಾನಸಿಕವಾಗಿ ಋಣಾತ್ಮಕ ಚಿಂತೆಗಳು ಕಾಡಲಿವೆ. ಅತಿಯಾದ ಕೆಲಸದಿಂದ ದೇಹ ಹೈರಾಣಾಗಬಹುದು. ನಿಮ್ಮ ಆರೋಗ್ಯದ ಬಗ್ಗೆ ಕಾಳಜಿವಹಿಸಿ. ಮಿತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಸಂಗಾತಿಯ ಸಲಹೆ ಉಪಯೋಗಕ್ಕೆ ಬರುವುದು.
 
ಕರ್ಕಟಕ: ನಿಮ್ಮ ಜೀವನದ ಶಾಂತಿ ಸಮಾಧಾನ ನೀವು ಕೈಗೊಳ್ಳುವ ನಿರ್ಧಾರದ ಮೇಲೆ ಅವಲಂಬಿತವಾಗಿದೆ. ಅತಿಯಾಗಿ ಇನ್ನೊಬ್ಬರ ಮೇಲೆ ಅವಲಂಬಿಸುವುದು, ನಂಬಿಕೆ ಇಟ್ಟುಕೊಳ್ಳುವುದರಿಂದ ಪಶ್ಚಾತ್ತಾಪ ಪಡಬೇಕಾದೀತು. ಹಿರಿಯರ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕಾಗುತ್ತದೆ.
 
ಸಿಂಹ: ಹೆಣ್ಣು ಮಕ್ಕಳಿಗೆ ತವರಿನ ಕಡೆಯಿಂದ ಉಡುಗೊರೆ ಸಿಗಲಿದೆ. ಸಾಮಾಜಿಕವಾಗಿ ಉನ್ನತ ಸ್ಥಾನ ಮಾನ ಲಭ್ಯವಾಗಲಿದೆ. ಆದರೆ ಅಪವಾದಗಳು ಬಾರದಂತೆ ಎಚ್ಚರವಹಿಸಬೇಕು. ಕೌಟುಂಬಿಕವಾಗಿ ಉತ್ತಮ ಸಮಯ ಕಳೆಯುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.
 
ಕನ್ಯಾ: ಉದ್ಯೋಗ ಕ್ಷೇತ್ರದಲ್ಲಿ ಯಥಾವತ್ತು ಕಾರ್ಯದೊತ್ತಡ ಅಧಿಕವೆನಿಸಲಿದೆ. ಇಷ್ಟಮಿತ್ರರೊಂದಿಗೆ ಭೋಜನ, ಉತ್ತಮ ಸಮಯ ಕಳೆಯುವಿರಿ. ಅಧಿಕ ಲಾಭ ತರುವ ಯೋಜನೆಗಳಿಗೆ ಕೈ ಹಾಕುವ ಮುನ್ನ ಸಾಕಷ್ಟು ಯೋಚಿಸಿ ಮುಂದೆ ಹೆಜ್ಜೆಯಿಡಿ. ದೇವರ ಮೇಲೆ ಭಕ್ತಿ ಹೆಚ್ಚಲಿದೆ.
 
ತುಲಾ: ವೃತ್ತಿರಂಗದಲ್ಲಿ ನಿಮ್ಮ ಅತಿಯಾದ ಆತ್ಮವಿಶ್ವಾಸವೇ ನಿಮಗೆ ಮುಳುವಾಗಬಹುದು. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
 
ವೃಶ್ಚಿಕ: ವಿದ್ಯಾರ್ಥಿಗಳಿಗೆ ಶಿಕ್ಷಕ ವೃಂದದವರಿಂದ ಮೆಚ್ಚುಗೆ ಸಿಗಲಿದೆ. ಕ್ರಿಯಾಶೀಲತೆಯಿಂದ ಕೆಲಸ ಮಾಡಿದಲ್ಲಿ ವೃತ್ತಿರಂಗದಲ್ಲಿ ಯಶಸ್ಸು ಸಿಗಲಿದೆ. ಆರ್ಥಿಕವಾಗಿ ಹಣಕಾಸಿಗೆ ತೊಂದರೆಯಿರದು. ಸಂಗಾತಿಯ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರ ಅಗತ್ಯ.
 
ಧನು: ಕಷ್ಟದ ಸಂದರ್ಭದಲ್ಲಿ ಮಿತ್ರರಿಂದ ಸಕಾಲದಲ್ಲಿ ನೆರವು ಸಿಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಗಳಿಸುವಿರಿ. ಅನಿರೀಕ್ಷಿತವಾಗಿ ಬಂಧು ಮಿತ್ರರ ಭೇಟಿಯಾಗುವಿರಿ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಸಾಂಸಾರಿಕವಾಗಿ ಸಂತೋಷವಿರಲಿದೆ.
 
ಮಕರ: ಅತಿಯಾಗಿ ಮಿತ್ರರ ಮೇಲೆ ಅವಲಂಬಿಸುವ ಬುದ್ಧಿ ಬಿಟ್ಟರೆ ಉತ್ತಮ. ಕೆಲವೊಮ್ಮೆ ನಂಬಿದವರಿಂದಲೇ ದ್ರೋಹವಾಗುತ್ತದೆ ಎಂಬುದನ್ನು ಮರೆಯಬೇಡಿ. ನೂತನ ದಂಪತಿಗಳಿಗೆ ಮಧುಚಂದ್ರ ಭಾಗ್ಯವಿದೆ. ವೃತ್ತಿ ರಂಗದಲ್ಲಿ ಲಾಭವಿಲ್ಲದಿದ್ದರೂ ನಷ್ಟವಾಗದು.
 
ಕುಂಭ: ಮಕ್ಕಳ ವಿಚಾರವಾಗಿ ಚಿಂತೆಯಾಗುವುದು. ಹಣಕಾಸಿನ ಲೆಕ್ಕಪತ್ರಗಳ ಬಗ್ಗೆ ಎಚ್ಚರ ಅಗತ್ಯ. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ನಿರುದ್ಯೋಗಿಗಳು ಸ್ವ ಉದ್ಯೋಗದ ಕಡೆಗೆ ಮನಸ್ಸು ಮಾಡುವರು. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿಯಿದೆ.
 
ಮೀನ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಬಡ್ತಿ, ವೇತನ ಹೆಚ್ಚಳ ಸಾಧ‍್ಯತೆಯಿದೆ. ಮನೆ, ಭೂಮಿ ಖರೀದಿಗೆ ಇದು ಸಕಾಲ. ಆರ್ಥಿಕವಾಗಿ ಅಭಿವೃದ್ಧಿ ಇರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಕಡಿದು ಹೋಗಿದ್ದ ಸಂಬಂಧಗಳು ಮತ್ತೆ ಬೆಸೆಯಲಿವೆ.
ಇದರಲ್ಲಿ ಇನ್ನಷ್ಟು ಓದಿ :