Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಗುರುವಾರ, 16 ಜನವರಿ 2020 (08:53 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳಿಂದ ಕಿರಿ ಕಿರಿ ಇರಲಿದೆ. ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಹೊಂದಾಣಿಕೆ ಮಾಡಿಕೊಳ್ಳಬೇಕಾಗುತ್ತದೆ. ನಿರುದ್ಯೋಗಿಗಳಿಗೆ ಉದ್ಯೋಗ ಲಾಭವಾಗಲಿದೆ. ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು.
 
ವೃಷಭ: ವೃತ್ತಿರಂಗದಲ್ಲಿ ನಿಮ್ಮ ವ್ಯವಹಾರಕ್ಕೆ ನಂಬಿದವರಿಂದಲೇ ತೊಂದರೆ ಎದುರಾಗಬಹುದು. ಬರುವ ಕಷ್ಟಗಳನ್ನು ಶಾಂತ ರೀತಿಯಿಂದ ನಿಭಾಯಿಸಿ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಕೊನೆಯ ಕ್ಷಣದಲ್ಲಿ ವಿಘ್ನ ಉಂಟಾಗಬಹುದು. ಹಿರಿಯರ ಸಲಹೆಗೆ ಕಿವಿಗೊಡಿ.
 
ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಕೋರ್ಟು ಕಚೇರಿ ಕಲಾಪಗಳಿಗೆ ಓಡಾಟ ನಡೆಸುವಿರಿ. ದೇವತಾ ಪ್ರಾರ್ಥನೆ ಮಾಡಿ.
 
ಕರ್ಕಟಕ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ವಿದೇಶ ಯಾನ ಭಾಗ್ಯವಿದೆ. ನೂತನ ದಂಪತಿಗಳಿಗೆ ಸಂತಾನಫಲ ಸೂಚನೆ ಸಿಗಲಿದೆ. ಸಾಂಸಾರಿಕವಾಗಿ ಸಂತಸದ ದಿನವಾಗಲಿದೆ. ಮಕ್ಕಳ ವಿಚಾರದಲ್ಲಿ ಒಳ್ಳೆಯ ಸುದ್ದಿ ಕೇಳುತ್ತೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.
 
ಸಿಂಹ: ವೃತ್ತಿರಂಗದಲ್ಲಿ ನಿಮ್ಮ ಕ್ರಿಯಾಶೀಲತೆ ಪ್ರಕಟವಾಗಲಿದೆ. ಸಾಮಾಜಿಕವಾಗಿ ಜನಮನ್ನಣೆ ಗಳಿಸುವಿರಿ. ವ್ಯಾಪಾರಿಗಳಿಗೆ ಧನ ಲಾಭವಾಗಲಿದೆ. ಆದರೆ ಸಾಂಸಾರಿಕವಾಗಿ ಸಂಗಾತಿಯೊಂದಿಗೆ ಮನಸ್ತಾಪವಾಗುವ ಸಾಧ‍್ಯತೆಗಳಿವೆ. ಕಾರ್ಯನಿಮಿತ್ತ ಕಿರುಸಂಚಾರ ಮಾಡುವಿರಿ.
 
ಕನ್ಯಾ: ವ್ಯವಹಾರದಲ್ಲಿ ಚೇತರಿಕೆ ಕಂಡುಬಂದು ಆರ್ಥಿಕವಾಗಿ ಉನ್ನತಿ ಕಂಡುಬರುವುದು. ಅಂದುಕೊಂಡಿದ್ದ ಯೋಜನೆಗಳನ್ನು ನೆರವೇರಿಸುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿ ಮಾಡುವಿರಿ. ಸರಕಾರಿ ಉದ್ಯೋಗಿಗಳಿಗೆ ಬಡ್ತಿ ಯೋಗವಿದೆ. ದೇವತಾ ಪ್ರಾರ್ಥನೆಯಿಂದ ಮತ್ತಷ್ಟು ಶುಭವಾಗಲಿದೆ.
 
ತುಲಾ: ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಪ್ರೀತಿ ಪಾತ್ರರ ಮನ ನೋಯಿಸದಂತೆ ಎಚ್ಚರಿಕೆ ವಹಿಸಿ. ಸಹೋದರರೊಂದಿಗೆ ಆಸ್ತಿ ವಿಚಾರದಲ್ಲಿ ವಿವಾದವಾಗಬಹುದು. ಹಿರಿಯರ ಮಧ್ಯಸ್ಥಿಕೆಗೆ ಬೆಲೆಕೊಡಿ.
 
ವೃಶ್ಚಿಕ: ಸಣ್ಣ ವ್ಯಾಪಾರಿಗಳಿಗೆ ಲಾಭವಾಗುವುದು. ಉದ್ಯೋಗ ಕ್ಷೇತ್ರದಲ್ಲಿ ಕೆಳಹಂತದ ನೌಕರರಿಗೆ ಏಳಿಗೆ ಕಂಡುಬರಲಿದೆ. ಸಾಂಸಾರಿಕವ ಭಿನ್ನಾಭಿಪ್ರಾಯಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ಅವಿವಾಹಿತರಿಗೆ ಶೀಘ್ರ ಕಲ್ಯಾಣ ಯೋಗವಿದೆ. ವಿದ್ಯಾರ್ಥಿಗಳು ಕಠಿಣ ಪರಿಶ್ರಮಪಡಬೇಕು.
 
ಧನು: ವ್ಯಾಪಾರಿ ವರ್ಗದವರು ಹೊಸ ವ್ಯವಹಾರಗಳಲ್ಲಿ ಹೂಡಿಕೆ ಮಾಡಲು ಇದು ಸಕಾಲ. ವಾಹನ ಸಂಚಾರ ಮಾಡುವಾಗ ಎಚ್ಚರಿಕೆ ಅಗತ್ಯ. ಕಾರ್ಯನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಹಿರಿಯರಿಂದ ಬಳವಳಿ ನಿರೀಕ್ಷಿಸಬಹುದು. ಧಾರ್ಮಿಕ ಕಾರ್ಯಗಳಿಗೆ ಧನವಿನಿಯೋಗ ಮಾಡುವಿರಿ.
 
ಮಕರ: ನೂತನ ದಂಪತಿಗಳಲ್ಲಿ ಹೊಂದಾಣಿಕೆಯ ಕೊರತೆ ಕಂಡುಬರಬಹುದು. ಕೌಟುಂಬಿಕವಾಗಿ ಸಂಬಂಧಗಳನ್ನು ಸೂಕ್ಷ್ಮವಾಗಿ ನಿಭಾಯಿಸಬೇಕು. ದುಡುಕು ಮಾತು, ವರ್ತನೆಗೆ ಕಡಿವಾಣವಿರಲಿ. ಉದ್ಯೋಗದಲ್ಲಿ ಮುನ್ನಡೆಯಿರಲಿದೆ. ದೇವತಾ ಪ್ರಾರ್ಥನೆ ಮಾಡಿ.
 
ಕುಂಭ: ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ಆದರೆ ನಿಮ್ಮ ಮನಸ್ಸಿಗೆ ಖುಷಿ ಕೊಡುವ ಕೆಲಸ ಮಾಡಲಿದ್ದೀರಿ. ಸಂಗಾತಿಯ ಅಲಂಕಾರಿಕ ವಸ್ತುಗಳಿಗೆ ಖರ್ಚು ಮಾಡಲಿದ್ದೀರಿ. ಹೊಸ ಜನರ ಭೇಟಿ ಹೊಸ ಯೋಜನೆಗಳಿಗೆ ದಾರಿ ಮಾಡಿಕೊಡಲಿದೆ.
 
ಮೀನ: ಮಹಿಳಾ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಮುನ್ನಡೆ ಸಿಗಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ. ಕಷ್ಟದ ಸಮಯದಲ್ಲಿ ಮಿತ್ರರ ನೆರವು ಸಿಗಲಿದೆ. ವಾಹನ ಖರೀದಿಗೆ ಕೆಲವು ದಿನ ಕಾಯುವುದು ಒಳಿತು. ಕಿರು ಸಂಚಾರ ಮಾಡುವಿರಿ.
ಇದರಲ್ಲಿ ಇನ್ನಷ್ಟು ಓದಿ :