ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳಿಂದ ಹೈರಾಣಾಗುವಿರಿ. ಸಹೋದ್ಯೋಗಿಗಳ ಸಹಕಾರ ಸಿಗಲಿದೆ. ಸಾಂಸಾರಿಕವಾಗಿ ಇದುವರೆಗೆ ಇದ್ದ ಭಿನ್ನಾಭಿಪ್ರಾಯಗಳಿಗೆ ಮಾತುಕತೆಯ ಮೂಲಕ ಪರಿಹಾರ ಕಂಡುಕೊಳ್ಳುವಿರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ವೃತ್ತಿರಂಗದಲ್ಲಿ ಆರ್ಥಿಕವಾಗಿ ಲಾಭವಿದ್ದರೂ ಹಿತಶತ್ರುಗಳಿಂದ ವಂಚನೆ ಭೀತಿಯಿದೆ. ಎಚ್ಚರಿಕೆಯಿಂದ ವ್ಯವಹರಿಸಬೇಕು. ಸಂಗಾತಿಯ ಬಹುದಿನಗಳ ಮನದಾಸೆ ಪೂರೈಸುವಿರಿ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯುವಿರಿ.ಮಿಥುನ: ನೀವು ಅಂದುಕೊಂಡ ಕೆಲಸಗಳಿಗೆ ಚಾಲನೆ ನೀಡುವಿರಿ. ಸಾಮಾಜಿಕವಾಗಿ