ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ವೃತ್ತಿರಂಗದಲ್ಲಿ ಬರುವ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಮೇಲಧಿಕಾರಿಗಳ ಅಸಹಕಾರ ನಿಮ್ಮ ಸಹನೆ ಪರೀಕ್ಷೆ ಮಾಡಲಿದೆ. ಸಂಗಾತಿಯ ಕೆಲವೊಂದು ನಿರ್ಧಾರಗಳು ನಿಮಗೆ ಹಿಡಿಸದೇ ಹೋಗಬಹುದು. ಆದರೂ ಸಂಯಮದಿಂದ ನಡೆದುಕೊಳ್ಳುವುದು ಮುಖ್ಯ.ವೃಷಭ: ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನ ನಿಮಿತ್ತ ದೂರ ಸಂಚಾರ ಮಾಡಬೇಕಾಗುತ್ತದೆ. ಹಳೆಯ ಬಾಕಿಗಳು ಪಾವತಿಯಾಗಲಿವೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ನಿಮ್ಮ ದುಡುಕು ಮಾತಿನಿಂದ ಸ್ನೇಹ