ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಗೃಹ ಬಳಕೆಯ ವಸ್ತುಗಳ ಖರೀದಿಗಾಗಿ ಧನವ್ಯಯ ಮಾಡಲಿದ್ದೀರಿ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕೆಲಸದಿಂದ ದೇಹಾಯಾಸವಾಗಬಹುದು. ಮಕ್ಕಳ ಭವಿಷ್ಯದ ಬಗ್ಗೆ ಯೋಜನೆ ರೂಪಿಸಬೇಕಾಗುತ್ತದೆ. ಮಾನಸಿಕವಾಗಿ ಚಿಂತೆಗಳಿಗೆ ಕಡಿವಾಣ ಹಾಕುವುದು ಉತ್ತಮ.ವೃಷಭ: ವೃತ್ತಿರಂಗದಲ್ಲಿ ಅನಿರೀಕ್ಷಿತವಾಗಿ ನಿಮ್ಮ ಕೆಲವೊಂದು ನಿರ್ಧಾರಗಳಿಂದಾಗಿ ಸಹೋದ್ಯೋಗಿಗಳೊಂದಿಗೆ ಮನಸ್ತಾಪವಾಗಬಹುದು. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ಹೊಸ ಮಿತ್ರರನ್ನು ಸಂಪಾದಿಸಲಿದ್ದೀರಿ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.ಮಿಥುನ: