Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಶನಿವಾರ, 15 ಫೆಬ್ರವರಿ 2020 (08:50 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಕೌಟುಂಬಿಕವಾಗಿ ಇಷ್ಟವಿಲ್ಲದಿದ್ದರೂ ಪ್ರೀತಿ ಪಾತ್ರರಿಗಾಗಿ ಕೆಲವೊಂದು ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಪ್ರಯತ್ನ ಬಲದಿಂದ ಯಶಸ್ಸು ಸಿಗಲಿದೆ. ಖರ್ಚು ವೆಚ್ಚಗಳ ಬಗ್ಗೆ ನಿಗಾ ಇರಲಿ.
 
ವೃಷಭ: ಅನೇಕ ರೀತಿಯ ಖರ್ಚು ವೆಚ್ಚಗಳು ತೋರಿಬರಲಿದ್ದು, ಆರ್ಥಿಕವಾಗಿ ಧನಾದಾಯ ಹೆಚ್ಚಳಕ್ಕೆ ನಾನಾ ಮಾರ್ಗ ಹುಡುಕಿಕೊಳ್ಳಿ. ಗೃಹಕೃತ್ಯಗಳಲ್ಲಿ ಸಂಗಾತಿಯ ಸಹಕಾರ ಸಿಗಲಿದೆ. ಅವಿವಾಹಿತರ ವಿವಾಹ ಪ್ರಯತ್ನಕ್ಕೆ ಮುನ್ನಡೆ ಸಿಗಲಿದೆ.
 
ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಮಾಡದ ತಪ್ಪಿಗೆ ಅನುಭವಿಸಬೇಕಾದ ಪರಿಸ್ಥಿತಿ ಬರಬಹುದು. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ವಿದ್ಯಾರ್ಥಿಗಳಿಗೆ ಶೈಕ್ಷಣಿಕ ರಂಗದಲ್ಲಿ ಪ್ರಗತಿ ಕಂಡುಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
 
ಕರ್ಕಟಕ: ಉದರ ಸಂಬಂಧೀ ಆರೋಗ್ಯ ಸಮಸ್ಯೆಗಳು ಕಂಡುಬರಬಹುದು. ನಾಲಿಗೆ ಚಪಲಕ್ಕೆ ನಿಯಂತ್ರಣ ಹಾಕುವುದು ಉತ್ತಮ. ಅಧಿಕಾರಿ ವರ್ಗದವರಿಗೆ ಅಧಿಕಾರ ಕಳೆದುಕೊಳ್ಳುವ ಭೀತಿ ಎದುರಾಗಲಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆಯಿರಲಿದೆ.
 
ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಬರುವ ತೊಂದರೆಗಳನ್ನು ನಿವಾರಿಸಲು ಮಿತ್ರರ ಸಹಾಯ ಪಡೆಯುವಿರಿ. ವಾಹನ ಚಾಲಕರಿಗೆ ಅಪಘಾತದ ಭಯವಿದ್ದು, ಎಚ್ಚರಿಕೆ ಅಗತ್ಯ. ನೆರೆಹೊರೆಯವರೊಂದಿಗೆ ಕಲಹವಾಗುವ ಸಾಧ್ಯತೆಯಿದೆ. ತಾಳ್ಮೆಯಿರಲಿ.
 
ಕನ್ಯಾ: ಮನಸ್ಸಿಗೆ ಇಷ್ಟವಿಲ್ಲದಿದ್ದರೂ ಕೆಲವೊಂದು ಕೆಲಸಗಳನ್ನು ಅನಿವಾರ್ಯವಾಗಿ ಮಾಡಬೇಕಾದ ಪರಿಸ್ಥಿತಿ ಎದುರಾಗಲಿದೆ. ಸಂಗಾತಿಯ ಸಾಂತ್ವನ ಮನಸ್ಸಿಗೆ ನೆಮ್ಮದಿ ನೀಡುವುದು. ಮಕ್ಕಳ ದೇಹಾರೋಗ್ಯದ ಬಗ್ಗೆ ಎಚ್ಚರಿಕೆಯಿರಲಿ. ಕಿರು ಸಂಚಾರ ಮಾಡಬೇಕಾಗುತ್ತದೆ.
 
ತುಲಾ: ಗೃಹ ಸಂಬಂಧೀ ಕೆಲಸಗಳಿಗಾಗಿ ಓಡಾಟ ತಪ್ಪದು. ಆರ್ಥಿಕವಾಗಿ ಲಾಭವಿಲ್ಲದಿದ್ದರೂ ನಷ್ಟವಾಗದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ಕಡಿದು ಹೋಗಿದ್ದ ಸಂಬಂಧಗಳು ಮರಳಿ ಕೂಡಲಿವೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.
 
ವೃಶ್ಚಿಕ: ಉದ್ಯೋಗ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದ್ದು, ಬಡ್ತಿ, ಮುನ್ನಡೆ ಪಡೆಯುವಿರಿ. ಸಣ್ಣ ವ್ಯಾಪಾರಿಗಳಿಗೆ ಆರ್ಥಿಕವಾಗಿ ಲಾಭವಾಗಲಿದೆ. ಬಹುದಿನಗಳ ನಂತರ ಹಳೆಯ ಮಿತ್ರನನ್ನು ಭೇಟಿಯಾದ ಸಂತಸ ಸಿಗಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ ಕಾದಿದೆ.
 
ಧನು: ಹಿರಿಯರ ತೀರ್ಥ ಯಾತ್ರೆಗೆ ಸಿದ್ಧತೆ ನಡೆಸುವಿರಿ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಗೃಹ ಬಳಕೆ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಕ್ಕಳಿಂದ ಸಂತಸದ ವಾರ್ತೆ ಆಲಿಸುವಿರಿ.
 
ಮಕರ: ವೃತ್ತಿರಂಗದಲ್ಲಿ ಕಾರ್ಯದೊತ್ತಡ ಅನುಭವಕ್ಕೆ ಬರಲಿದೆ. ಅಧಿಕ ಓಡಾಟದಿಂದ ದೇಹಾಯಾಸವಾಗದಂತೆ ಎಚ್ಚರಿಕೆ ವಹಿಸಿ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ನೂತನ ದಂಪತಿಗೆ ಸಂತಾನ ಫಲವಿದೆ.
 
ಕುಂಭ: ವೈಯಕ್ತಿಕ ಆರೋಗ್ಯದ ಬಗ್ಗೆ ಉಪೇಕ್ಷೆ ಬೇಡ. ಅನಿರೀಕ್ಷಿತವಾಗಿ ಮನೆಗೆ ಬಂಧು ಮಿತ್ರರ ಆಗಮನವಾಗಲಿದ್ದು, ಮನಸ್ಸಿಗೆ ಸಂತಸವಾಗಲಿದೆ. ವೃತ್ತಿರಂಗದಲ್ಲಿ ಸ್ಥಾನ ಮಾನಕ್ಕೆ ಧಕ್ಕೆಯಾಗದು. ದೂರ ಪ್ರಯಾಣದಿಂದ ದೇಹಾಯಾಸವಾಗಲಿದೆ.
 
ಮೀನ: ಕೆಳ ಹಂತದ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ ಸಿಗಲಿದೆ. ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ಹೆಚ್ಚಲಿದೆ. ಸಾಂಸಾರಿಕವಾಗಿ ಸಮಸ್ಯೆಗಳು ತೋರಿಬಂದೀತು. ಸಂಯಮದಿಂದ ನಿಭಾಯಿಸಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.
ಇದರಲ್ಲಿ ಇನ್ನಷ್ಟು ಓದಿ :