Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಬುಧವಾರ, 19 ಫೆಬ್ರವರಿ 2020 (08:45 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ವ್ಯಾಪಾರ ವ್ಯವಹಾರದಲ್ಲಿ ನಿರೀಕ್ಷಿತ ಲಾಭ ಗಳಿಸಬಹುದು. ಆದರೆ ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆರೋಗ್ಯದಲ್ಲಿ ಏರುಪೇರಾಗಲಿದ್ದು, ಚಿಂತೆಯಾಗಲಿದೆ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಇರಲಿದೆ. ವಿದ್ಯಾರ್ಥಿಗಳಿಗೆ ಶುಭ ದಿನ.
 
ವೃಷಭ: ಆರ್ಥಿಕವಾಗಿ ನಿರೀಕ್ಷಿತ ರೀತಿಯಲ್ಲಿ ಆದಾಯ ಬರದೇ ಚಿಂತೆಯಾಗುವುದು. ಅಂದುಕೊಂಡ ಕೆಲಸ ಕಾರ್ಯಗಳನ್ನು ಮುಗಿಸಲು ಅಡೆತಡೆಗಳು ಬಂದೀತು. ಸಾಂಸಾರಿಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವಿರಿ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
 
ಮಿಥುನ: ಸಾಮಾಜಿಕವಾಗಿ ನಿಮ್ಮ ಸ್ಥಾನ ಮಾನ ವೃದ್ಧಿಯಾಗಲಿದೆ. ಅಧಿಕ ಲಾಭ ತರುವ ಯೋಜನೆಗಳಿಗೆ ಕೈ ಹಾಕುವಿರಿ. ಕಷ್ಟದ ಸಮಯದಲ್ಲಿ ಮಿತ್ರರ ಸಹಾಯ ದೊರೆಯಲಿದೆ. ಹಿರಿಯರಿಗೆ ಪುಣ್ಯ ಕ್ಷೇತ್ರಗಳ ಸಂದರ್ಶನ ಯೋಗವಿದೆ. ದಿನದಂತ್ಯಕ್ಕೆ ಶುಭ ಸುದ್ದಿ.
 
ಕರ್ಕಟಕ: ಶಿಕ್ಷಕ ವರ್ಗದವರಿಗೆ ಉದ್ಯೋಗದಲ್ಲಿ ಬಡ್ತಿ ಸಂಭವವಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮ ಪಡಬೇಕಾಗಬಹುದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಸಾಂಸಾರಿಕವಾಗಿ ಖರ್ಚು ವೆಚ್ಚ ಸರಿದೂಗಿಸಲು ಹೆಣಗಾಡಬೇಕಾದೀತು. ಹಳೇ ಬಾಕಿ ವಸೂಲಾತಿ ಮಾಡುವಿರಿ.
 
ಸಿಂಹ: ದೈವಾನುಗ್ರಹ ಉತ್ತಮವಾಗಿದ್ದು ಇಂದು ಕೈ ಹಿಡಿದ ಯೋಜನೆಗಳು ಸಫಲವಾಗಲಿದೆ. ವ್ಯಾಪಾರಸ್ಥರಿಗೆ ಆರ್ಥಿಕ ಲಾಭ ಕಂಡುಬರುವುದು. ಆದರೆ ದುಂದು ವೆಚ್ಚಗಳಿಗೆ ಕಡಿವಾಣ ಹಾಕುವುದು ಉತ್ತಮ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.
 
ಕನ್ಯಾ: ವೃತ್ತಿರಂಗದಲ್ಲಿ ನಿಮ್ಮ ಮೇಲೆ ಹೆಚ್ಚಿನ ಹೊಣೆಗಾರಿಕೆ ಬೀಳಲಿದೆ. ಹೊಸ ಅವಕಾಶಗಳು ಒದಗಿಬರಲಿವೆ. ಜಾಣತನದಿಂದ ಬಳಸಿಕೊಳ್ಳಬೇಕು. ಸಂಗಾತಿಯೊಂದಿಗಿನ ಭಿನ್ನಾಭಿಪ್ರಾಯಗಳು ದೂರವಾಗಲಿವೆ. ಅಧಿಕಾರಿ ವರ್ಗದವರಿಗೆ ವರ್ಗಾವಣೆ ಭೀತಿಯಿದೆ.
 
ತುಲಾ: ಅವಿವಾಹಿತರಿಗೆ ವಿವಾಹ ಪ್ರಯತ್ನದಲ್ಲಿ ಅಡೆತಡೆಗಳು ತೋರಿಬಂದೀತು. ಕುಲದೇವರ ಪ್ರಾರ್ಥನೆ ಮಾಡಿ ಮುಂದೆ ಹೆಜ್ಜೆಯಿಡಿ. ಇಂದು ಯಾರ ಬಳಿಯೂ ಸಾಲ ಮಾಡಲು ಹೋಗಬೇಡಿ. ಉದ್ಯೋಗದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ.
 
ವೃಶ್ಚಿಕ: ಮನೆಯಲ್ಲಿ ಶುಭ ಮಂಗಲ ಕಾರ್ಯಗಳಿಗಾಗಿ ಸಿದ್ಧತೆ ನಡೆಸಲಿದ್ದೀರಿ. ಗೃಹ ನಿರ್ಮಾಣ ಕಾರ್ಯದಲ್ಲಿ ತೊಡಗಲು ಸಕಾಲ. ವಾಹನ ಖರೀದಿಯಿಂದ ಲಾಭವಾಗಲಿದೆ. ಮನೆಗೆ ಅನರೀಕ್ಷಿತವಾಗಿ ಬಂಧು ಮಿತ್ರರ ಆಗಮನವಾಗಲಿದ್ದು, ಸಂತಸವಾಗಲಿದೆ.
 
ಧನು: ಆರೋಗ್ಯದಲ್ಲಿ ಆಗಾಗ ಏರುಪೇರಾಗುವುದರಿಂದ ದೇಹಾಯಾಸವಾಗಲಿದೆ. ನಿಮ್ಮ ಪ್ರಯತ್ನಕ್ಕೆ ತಕ್ಕ ಫಲ ಸಿಗಲಿದೆ. ದಾಂಪತ್ಯದಲ್ಲಿ ತಾಳ್ಮೆಯಿಂದಿದ್ದರೆ ನೆಮ್ಮದಿಯಿರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಸಕ್ತಿ ಕಡಿಮೆಯಾಗಬಹುದು. ತಾಳ್ಮೆಯಿಂದಿರಿ.
 
ಮಕರ: ಅರ್ಧಕ್ಕೇ ನಿಂತ ಕೆಲಸ ಕಾರ್ಯಗಳಿಗೆ ಚಾಲನೆ ನೀಡಲಿದ್ದೀರಿ. ಆರ್ಥಿಕವಾಗಿ ಖರ್ಚು ವೆಚ್ಚಗಳಿದ್ದರೂ ಉತ್ತಮ ಕೆಲಸಗಳಿಗೆ ಬಳಕೆಯಾದ ಸಂತೃಪ್ತಿ ಸಿಗಲಿದೆ. ಗೃಹ ಬಳಕೆ ವಸ್ತುಗಳ ಖರೀದಿ ಮಾಡಲಿದ್ದೀರಿ. ಕಾರ್ಯನಿಮಿತ್ತ ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ.
 
ಕುಂಭ: ಮಾನಸಿಕವಾಗಿ ಒಂದು ರೀತಿಯ ಋಣಾತ್ಮಕ ಚಿಂತೆ ಕಾಡುವುದು. ಆಪ್ತರ ಬಳಿ ಮನದಾಳದ ಮಾತುಗಳನ್ನು ಹಂಚಿಕೊಳ್ಳಲಿದ್ದೀರಿ. ಸಂಗಾತಿಯಿಂದ ಕಿರಿ ಕಿರಿ ಇರಲಿದೆ. ಪಾಲು ಬಂಡವಾಳ ವ್ಯವಹಾರದಲ್ಲಿ ಲಾಭ ಕಂಡುಬರುವುದು. ದೇವರ ಪ್ರಾರ್ಥನೆ ಮಾಡಿ.
 
ಮೀನ: ಸಾಂಸಾರಿಕವಾಗಿ ನಿಮ್ಮ ನಿರ್ಧಾರಗಳಿಗೆ ಮನೆಯವರ ಒಪ್ಪಿಗೆ ಸಿಗದೇ ಒಂದು ರೀತಿಯ ಗೊಂದಲದ ವಾತಾವರಣವಿರಲಿದೆ. ಉದ್ಯೋಗ ಕ್ಷೇತ್ರದಲ್ಲಿ ಮೇಲಧಿಕಾರಿಗಳ ನಿಷ್ಠುರಕ್ಕೆ ಕಾರಣವಾಗುವಿರಿ. ಆರ್ಥಿಕವಾಗಿ ಪರಿಸ್ಥಿತಿ ಸುಧಾರಿಸಲಿದೆ.
ಇದರಲ್ಲಿ ಇನ್ನಷ್ಟು ಓದಿ :