ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸಾಮಾಜಿಕವಾಗಿ ಹೆಚ್ಚಿನ ಚಟುವಟಿಕೆಗಳಲ್ಲಿ ಭಾಗಿಯಾಗುವಿರಿ. ಉದ್ಯೋಗ ಕ್ಷೇತ್ರದಲ್ಲಿ ಎಲ್ಲವೂ ನೀವು ಅಂದುಕೊಂಡಂತೆ ನಡೆಯುತ್ತಿಲ್ಲ ಎಂಬ ಬೇಸರ ಕಾಡಬಹುದು. ಸಾಂಸಾರಿಕವಾಗಿ ನೆಮ್ಮದಿಯಿರಲಿದೆ. ದುಂದುವೆಚ್ಚಗಳಿಗೆ ಕಡಿವಾಣವಿರಲಿ.ವೃಷಭ: ಮಹಿಳೆಯರಿಗೆ ಗೃಹಕೃತ್ಯಗಳಲ್ಲಿ ಉದಾಸೀನ ಪ್ರವೃತ್ತಿ ಕಂಡುಬರಬಹುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ವ್ಯವಹಾರದಲ್ಲಿ ಇದುವರೆಗೆ ಇದ್ದ ಅಡೆತಡೆಗಳು ನಿವಾರಣೆಯಾಗಲಿದೆ. ಕುಲದೇವರ ಪ್ರಾರ್ಥನೆಯಿಂದ ಶುಭವಾಗಲಿದೆ.ಮಿಥುನ: ಪಾಲುದಾರಿಕೆ ವ್ಯವಹಾರ ಮಾಡುತ್ತಿದ್ದವರಿಗೆ ವ್ಯವಹಾರದಲ್ಲಿ ನಷ್ಟ ಉಂಟಾಗಲಿದೆ. ನಯವಂಚಕರ ಬಗ್ಗೆ