ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ದೇವತಾ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ವೈಯಕ್ತಿಕವಾಗಿ ದೇಹಾರೋಗ್ಯದ ಬಗ್ಗೆ ಗಮನವಿರಲಿ. ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದ ಕಾರ್ಯದೊತ್ತಡವಿರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ವೃಷಭ: ವಿದ್ಯಾರ್ಥಿಗಳಲ್ಲಿ ಉತ್ಸಾಹ ಕಂಡುಬರಲಿದೆ. ವೃತ್ತಿರಂಗದಲ್ಲಿ ನಿಮಗರಿವಿಲ್ಲದಂತೆಯೇ ನಡೆಯುವ ತಪ್ಪುಗಳಿಂದ ಮೇಲಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗುವಿರಿ. ಅಪರಿಚಿತರೊಂದಿಗೆ ವ್ಯವಹರಿಸುವಾಗ ಎಚ್ಚರವಿರಲಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.ಮಿಥುನ: ಸಾಂಸಾರಿಕವಾಗಿ ಕುಟುಂಬ ಸದಸ್ಯರ ನಡುವೆ ಭಿನ್ನಾಭಿಪ್ರಾಯ ತಲೆದೋರಲಿದ್ದು, ಮಾನಸಿಕವಾಗಿ