Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಬುಧವಾರ, 18 ಮಾರ್ಚ್ 2020 (09:07 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.
 

ಮೇಷ: ಸರಕಾರಿ ಅಧಿಕಾರಿ ವರ್ಗದವರಿಗೆ ವರ್ಗಾವಣೆಯ ಭೀತಿಯಿದೆ. ದೇಹಾರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾಗಿ ಚಿಂತೆಗೆ ಕಾರಣವಾಗಲಿದೆ. ಸಾಂಸಾರಿಕವಾಗಿ ತಾಳ್ಮೆ, ಹೊಂದಾಣಿಕೆ ಅಗತ್ಯ. ಕಾರ್ಯನಿಮಿತ್ತ ಆಗಾಗ ಓಡಾಟ ನಡೆಸಬೇಕಾಗಬಹುದು.
 
ವೃಷಭ: ಮಕ್ಕಳಿಗೆ ವಿದ್ಯಾಭ್ಯಾಸದಲ್ಲಿ ನಿರುತ್ಸಾಹ ಕಂಡುಬರಲಿದೆ. ಗೃಹನಿರ್ಮಾಣ ಕಾರ್ಯಗಳಿಗೆ ಕೈ ಹಾಕಲು ಇದು ಸಕಾಲ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಅವಿವಾಹಿತರಿಗೆ ಶೀಘ್ರ ಕಂಕಣ ಭಾಗ್ಯವಿದೆ. ಕೃಷಿಕರಿಗೆ ವ್ಯವಹಾರದಲ್ಲಿ ಮುನ್ನಡೆ ಸಿಗಲಿದೆ.
 
ಮಿಥುನ: ನ್ಯಾಯಾಲಯದ ಕಲಾಪದಲ್ಲಿ ಹಿನ್ನಡೆಯಾದೀತು. ಹಿತಶತ್ರುಗಳಿಂದ ತೊಂದರೆಯಾಗಲಿದೆ. ಎಚ್ಚರಿಕೆ ಅಗತ್ಯ. ವ್ಯವಹಾರದಲ್ಲಿ ಲೆಕ್ಕಾಚಾರಗಳ ಬಗ್ಗೆ ನಿಗಾ ಇರಲಿ. ವಿದ್ಯಾರ್ಥಿಗಳಿಗೆ ವಿದೇಶ ಯಾನದ ಯೋಗವಿದೆ. ಕುಲದೇವರ ಪ್ರಾರ್ಥನೆ ಮಾಡಿ.
 
ಕರ್ಕಟಕ: ಅವಿವಾಹಿತರಿಗೆ ವಿವಾಹ ಪ್ರಯತ್ನ ನಡೆಸಲು ಇದು ಸಕಾಲ. ನೂತನ ದಂಪತಿಗಳಿಗೆ ಮಧು ಚಂದ್ರ ಭಾಗ್ಯವಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ. ಆರ್ಥಿಕವಾಗಿ ಆದಾಯವಿದ್ದಷ್ಟೇ ಖರ್ಚೂ ಕಂಡುಬರಲಿದೆ. ದುರ್ಜನರಿಂದ ದೂರವಿರುವುದೇ ಉತ್ತಮ.
 
ಸಿಂಹ: ಉದ್ಯೋಗ ಕ್ಷೇತ್ರದಲ್ಲಿ ಎಲ್ಲವೂ ನಿಮ್ಮ ಪ್ರತಿಕೂಲವಾಗಿ ನಡೆಯುತ್ತದೆ ಎಂಬ ಭಾವನೆ ಮೂಡಲಿದೆ. ಸಹೋದ್ಯೋಗಿಗಳೊಂದಿಗೆ ಹೊಂದಾಣಿಕೆ ಅಗತ್ಯ. ಹಿರಿಯರ ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ. ಕೌಟುಂಬಿಕವಾಗಿ ಹೆಚ್ಚಿನ ಹೊಣೆಗಾರಿಕೆ ಹೊರಬೇಕಾಗುತ್ತದೆ.
 
ಕನ್ಯಾ: ಅಧಿಕ ಧನಲಾಭ ತರುವ ಯೋಜನೆಗಳಿಗೆ ಕೈಹಾಕುವ ಮುನ್ನ ವಂಚನೆಗೊಳಗಾಗದಂತೆ ಎಚ್ಚರಿಕೆ ವಹಿಸಿ. ಮನೆರಿಪೇರಿ ಇತ್ಯಾದಿಗಳಿಗೆ ಖರ್ಚು ವೆಚ್ಚಗಳಾಗಲಿವೆ. ಸಂತಾನಾಪೇಕ್ಷಿತ ದಂಪತಿಗಳು ದೇವರ ಮೊರೆ ಹೋಗಲಿದೆ. ದಿನದಂತ್ಯಕ್ಕೆ ಶುಭ ಸುದ್ದಿ.
 
ತುಲಾ: ವ್ಯವಹಾರ ನಿಮಿತ್ತ ಅಧಿಕ ಓಡಾಟದಿಂದ ದೇಹಾಯಾಸವಾಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ದಾಂಪತ್ಯದಲ್ಲಿ ಹೊಂದಾಣಿಕೆ ಅಗತ್ಯ. ಹಣಕಾಸಿನ ಅಡಚಣೆಯಿಂದಾಗಿ ಅಂದುಕೊಂಡ ಕೆಲಸ ನೆರವೇರಿಸಲು ತೊಂದರೆಯಾಗಬಹುದು.
 
ವೃಶ್ಚಿಕ: ರಾಜಕೀಯ ಕ್ಷೇತ್ರದಲ್ಲಿರುವವರಿಗೆ ಹಿತಶತ್ರುಗಳ ಕಾಟದಿಂದ ಕೈಗೆ ಬಂದ ಭಾಗ್ಯ ಬಾಯಿಗೆ ಬರದಂತಾಗಬಹುದು. ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ದೂರ ಸಂಚಾರಕ್ಕೆ ಸಿದ್ಧತೆ ನಡೆಸುವಿರಿ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.
 
ಧನು: ಕಾರ್ಯರಂಗದಲ್ಲಿ ಯಶಸ್ಸಿಗಾಗಿ ದುಪ್ಪಟ್ಟು ಶ್ರಮವಹಿಸಬೇಕಾಗುತ್ತದೆ. ದುಡುಕು ಮಾತಿಗೆ ಕಡಿವಾಣ ಹಾಕುವುದು ಉತ್ತಮ. ಹೊಸ ಜವಾಬ್ಧಾರಿಗಳಿಗೆ ಸಿದ್ಧರಾಗಬೇಕಾಗುತ್ತದೆ. ಮನೆಗೆ ಅತಿಥಿಗಳ ಆಗಮನವಾಗಲಿದೆ. ಮಕ್ಕಳಿಂದ ಸಂತಸ ಸಿಗಲಿದೆ.
 
ಮಕರ: ವಿದ್ಯಾರ್ಥಿಗಳಿಗೆ ಉನ್ನತ ವ್ಯಾಸಂಗಕ್ಕಾಗಿ ಪ್ರಯತ್ನಪಡುತ್ತಿದ್ದರೆ ಅಡೆತಡೆಗಳು ತೋರಿಬಂದಾವು. ಕುಲದೇವರ ಪ್ರಾರ್ಥನೆ ನಡೆಸುವುದು ಉತ್ತಮ. ಯಾವುದೇ ಕೆಲಸ ನಿರೀಕ್ಷಿತ ರೀತಿಯಲ್ಲಿ ನಡೆಯದೇ ಬೇಸರವಾಗಬಹುದು. ಆದರೆ ತಾಳ್ಮೆ ಕಳೆದುಕೊಳ್ಳಬೇಡಿ.
 
ಕುಂಭ: ಅನಗತ್ಯ ವಿಚಾರಗಳಿಗೆ ಚಿಂತೆ ಮಾಡುವುದನ್ನು ಬಿಡಿ. ಮಕ್ಕಳ ಆರೋಗ್ಯ ಸಮಸ್ಯೆ ಚಿಂತೆಗೀಡು ಮಾಡುವುದು. ಪುಣ್ಯ ಕ್ಷೇತ್ರಗಳ ಸಂದರ್ಶನ ಮಾಡುವಿರಿ. ದೇಹಾರೋಗ್ಯದ ಬಗ್ಗೆ ಕಾಳಜಿ ಅಗತ್ಯ. ಹಳೆಯ ಸಂಬಂಧಗಳು ಮರಳಿ ಕೂಡಿಕೊಳ್ಳಲಿದೆ.
 
ಮೀನ: ಸಾಂಸಾರಿಕವಾಗಿ ಸಂತಸದ ದಿನಗಳಿದು. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಸಿದ್ಧತೆ ನಡೆಸುವಿರಿ. ಸಹೋದರಿಯರ ವಿವಾಹ ಪ್ರಯತ್ನದಲ್ಲಿ ಯಶಸ್ಸು ಸಿಗಲಿದೆ. ಆದರೆ ಅನಿರೀಕ್ಷಿತವಾಗಿ ಖರ್ಚು ವೆಚ್ಚಗಳು ಎದುರಾಗಲಿವೆ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
ಇದರಲ್ಲಿ ಇನ್ನಷ್ಟು ಓದಿ :