ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ಯೋಗ ಕ್ಷೇತ್ರದಲ್ಲಿ ಮನಸ್ಸಿನಲ್ಲಿ ಅಂದುಕೊಂಡಿದ್ದ ಕೆಲಸ ಕಾರ್ಯಗಳನ್ನು ನಿರ್ವಹಿಸಲಾಗದೇ ಒದ್ದಾಡಬೇಕಾದೀತು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇಹಾರೋಗ್ಯದಲ್ಲಿ ಏರುಪೇರಾಗಬಹುದು, ಎಚ್ಚರಿಕೆಯಿರಲಿ.ವೃಷಭ: ಅಂದುಕೊಂಡ ಕೆಲಸಗಳನ್ನು ಪೂರ್ತಿ ಮಾಡಲು ಅಡೆತಡೆಗಳು ತೋರಿಬಂದೀತು. ಹೆಚ್ಚಿನ ಧನಾರ್ಜನೆಗೆ ನಾನಾ ಮಾರ್ಗಗಳನ್ನು ಕಂಡುಕೊಳ್ಳುವಿರಿ. ನಿರುದ್ಯೋಗಿಗಳು ಸ್ವಯಂ ಉದ್ಯೋಗದಿಂದ ಲಾಭ ಪಡೆಯಬಹುದು. ವಿದ್ಯಾರ್ಥಿಗಳಿಗೆ ಪರಿಶ್ರಮ ಅಗತ್ಯ.ಮಿಥುನ: ಇಷ್ಟು ದಿನ ಮಾಡಬೇಕೆಂದಿದ್ದ ನಿಮ್ಮ ಇಷ್ಟದ ಕೆಲಸಗಳನ್ನು ಮಾಡಲಿದ್ದೀರಿ.