ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಅತಿಯಾದ ನಯ ವರ್ತನೆ ತೋರುವವರ ಜತೆಗೆ ಎಚ್ಚರಿಕೆಯಿಂದ ವ್ಯವಹರಿಸಿ. ಕಂಡಿದ್ದೆಲ್ಲವನ್ನೂ ಖರೀದಿಸುವ ಬಯಕೆಯಾಗಬಹುದು. ದುಂದು ವೆಚ್ಚಗಳಿಗೆ ಕಡಿವಾಣ ಹಾಕಿ. ಕಾರ್ಯರಂಗದಲ್ಲಿ ಉನ್ನತ ಸ್ಥಾನ ಮಾನದ ಯೋಗವಿದೆ. ದಿನದಂತ್ಯಕ್ಕೆ ಅಚ್ಚರಿಯ ಸುದ್ದಿ.ವೃಷಭ: ಸ್ನೇಹಿತರ ಕಷ್ಟಕ್ಕೆ ಮರುಗಿ ಸಹಾಯ ಮಾಡಲು ಮುಂದಾಗುವಿರಿ. ಇಷ್ಟದೇವರಿಗೆ ಹರಕೆ, ಪ್ರಾರ್ಥನೆ ಸಲ್ಲಿಸಲಿದ್ದೀರಿ. ಸಾಧು ಸಂತರ ಭೇಟಿ ಸಂಭವ. ಮಹಿಳೆಯರಿಗೆ ತವರಿನಿಂದ ಅನಿರೀಕ್ಷಿತ ಉಡುಗೊರೆ ಸಿಗಲಿದೆ.