ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಬದುಕು ಪಾಠ ಕಲಿಸುತ್ತಿದೆ ಎಂಬ ಭಾವನೆ ಬರಲಿದೆ. ಮಾನಸಿಕವಾಗಿ ಗೊಂದಲ ಕಾಡಲಿದ್ದು, ನಿರ್ಧಾರ ಕೈಗೊಳ್ಳುವಾಗ ಸಂಗಾತಿಯ ಸಲಹೆ ಪಡೆಯುವುದು ಉತ್ತಮ. ಅನಾರೋಗ್ಯ ಭಯ ಕಾಡುವುದು. ಕುಲದೇವರ ಪ್ರಾರ್ಥನೆ ಮಾಡಿ.ವೃಷಭ: ವೃತ್ತಿರಂಗದಲ್ಲಿ ಮುನ್ನಡೆಗೆ ಅವಕಾಶ ದೊರೆಯಲಿದೆ. ನಿಮ್ಮ ಏಳಿಗೆಗೆ ಮೇಲಧಿಕಾರಿಗಳ ಸಹಕಾರ ಸಿಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಆರೋಗ್ಯದ ಬಗ್ಗೆ