Widgets Magazine

ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಶನಿವಾರ, 16 ಮೇ 2020 (08:55 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಹಣಕಾಸಿನ ವಿಚಾರದಲ್ಲಿ ಎಚ್ಚರಿಕೆಯಿಂದ ಖರ್ಚು ವೆಚ್ಚಗಳನ್ನು ಮಾಡಬೇಕಾಗುತ್ತದೆ. ಹೊಸ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ಸಿದ್ಧತೆ ನಡೆಸಲಿದ್ದೀರಿ. ಕಷ್ಟದ ಸಮಯದಲ್ಲಿ ಆತ್ಮೀಯರ ಸಲಹೆಗಳು ಉಪಯೋಗಕ್ಕೆ ಬರುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ವೃಷಭ: ವ್ಯಾಪಾರಿಗಳಿಗೆ ವ್ಯವಹಾರದಲ್ಲಿ ಚೇತರಿಕೆಯ ವಾತಾವರಣ ಕಂಡುಬರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಸಾಂಸಾರಿಕವಾಗಿ ನೆಮ್ಮದಿ ಕಂಡುಬರಲಿದೆ. ಪ್ರೀತಿ ಪಾತ್ರರೊಂದಿಗೆ ಉತ್ತಮ ಸಮಯ ಕಳೆಯಲಿದ್ದೀರಿ. ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ.
 
ಮಿಥುನ: ಪ್ರೇಮಿಗಳಿಗೆ ಹಿರಿಯರ ಒಪ್ಪಿಗೆ ಸಿಗಲಿದೆ. ನೂತನ ದಂಪತಿಗಳಿಗೆ ದಾಂಪತ್ಯದಲ್ಲಿ ಹೊಂದಾಣಿಕೆ ಕೊರತೆ ಕಂಡುಬರಬಹುದು. ಅಧಿಕ ಓಡಾಟದಿಂದ ದೇಹಾಯಾಸವಾಗಬಹುದು. ಧಾರ್ಮಿಕ ಕಾರ್ಯಕ್ರಮಗಳಿಗೆ ಧನವಿನಿಯೋಗ ಮಾಡಲಿದ್ದೀರಿ.
 
ಕರ್ಕಟಕ: ತಪ್ಪಿ ಹೋದ ಅವಕಾಶಗಳ ಬಗ್ಗೆ ಚಿಂತಿಸುತ್ತಾ ಕೂತರೆ ಪ್ರಯೋಜನವಿಲ್ಲ. ಸವಾಲುಗಳನ್ನು ಎದುರಿಸಲು ಹೊಸ ದಾರಿಗಳನ್ನು ಕಂಡುಕೊಳ್ಳಲಿದ್ದೀರಿ. ಪ್ರೀತಿ ಪಾತ್ರರ ಮನಸ್ಸಿಗೆ ನೋವಾಗುವಂತೆ ನಡೆದುಕೊಳ್ಳಬೇಡಿ. ವೃತ್ತಿರಂಗದಲ್ಲಿ ಮುನ್ನಡೆಯಿರಲಿದೆ.
 
ಸಿಂಹ: ಯೋಗ್ಯ ವಯಸ್ಕರಿಗೆ ಮನಸ್ಸಿಗೆ ಹಿಡಿಸಿದ ಸಂಬಂಧಗಳು ಕೂಡಿಬರಲಿವೆ. ಕೌಟುಂಬಿಕವಾಗಿ ಹೊಸ ಜವಾಬ್ಧಾರಿಗಳು ಹೆಗಲಿಗೇರಲಿವೆ. ನಿರುದ್ಯೋಗಿಗಳಿಗೆ ಉದ್ಯೋಗ ಸಂದರ್ಶನಕ್ಕೆ ಕರೆಬರಲಿದೆ. ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಲಸ್ಯತನ ಕಂಡುಬರಬಹುದು. ತಾಳ್ಮೆ ಅಗತ್ಯ.
 
 
ಕನ್ಯಾ: ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅಷ್ಟೇ ಖರ್ಚೂ ಇರುವುದರಿಂದ ಕೈಗೆ ಬಂದ ತುತ್ತು ಬಾಯಿಗೆ ಬರದ ಸ್ಥಿತಿಯಾಗುವುದು. ಪಾಲು ಬಂಡವಾಳ ವ್ಯವಹಾರದಿಂದ ಲಾಭ ಗಳಿಸುವಿರಿ. ಗೃಹೋಪಯೋಗಿ ವಸ್ತುಗಳ ಖರೀದಿಗೆ ಓಡಾಡಬೇಕಾಗುತ್ತದೆ.
 
ತುಲಾ: ಕಮಿಷನ್ ವೃತ್ತಿಯವರಿಗೆ ಉತ್ತಮ ಲಾಭವಿದೆ. ಚಿಂತಿತ ಕೆಲಸಗಳನ್ನು ಮಾಡಿ ಮುಗಿಸಲಿದ್ದೀರಿ. ವೈಯಕ್ತಿಕ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿವಹಿಸುವುದು ಸೂಕ್ತ. ಸರಕಾರಿ ಉದ್ಯೋಗಿಗಳಿಗೆ ಕಾರ್ಯದೊತ್ತಡ ಹೆಚ್ಚಲಿದೆ. ತಾಳ್ಮೆ, ಸಮಾಧಾನ ಅಗತ್ಯ.
 
ವೃಶ್ಚಿಕ: ಸಂಚಾರದಿಂದ ಕಾರ್ಯ ಸಾಧನೆಯಾಗಲಿದೆ. ಹೊಸ ಮಿತ್ರರ ಸಂಪಾದಿಸಲಿದ್ದೀರಿ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಮುನ್ನಡೆ ಸಿಗಲಿದೆ. ದಾಯಾದಿ ಕಲಹಗಳು ಅಂತ್ಯವಾಗಲಿದೆ. ಹಿರಿಯರ ಸಲಹೆಗಳಿಗೆ ಕಿವಿಗೊಡಿ. ಆರೋಗ್ಯದಲ್ಲಿ ಸುಧಾರಣೆಯಾಗಲಿದೆ.
 
ಧನು: ಉದ್ಯೋಗ ಕ್ಷೇತ್ರದಲ್ಲಿ ಸ್ಥಾನ ಪಲ್ಲಟ ಭೀತಿ ಎದುರಾಗಲಿದೆ. ಕೆಳ ಹಂತದ ನೌಕರರಿಗೆ ಉದ್ಯೋಗ ಕಳೆದುಕೊಳ್ಳುವ ಭೀತಿ. ದೈಹಿಕ ಆರೋಗ್ಯದಲ್ಲಿ ಸುಧಾರಣೆ ಕಂಡುಬರುವುದು. ಸ್ವಯಂ ವೃತ್ತಿಯವರು ಲಾಭ ಗಳಿಸಲಿದ್ದಾರೆ. ದೇವತಾ ಪ್ರಾರ್ಥನೆ ಮಾಡಿ.
 
ಮಕರ: ಹಣಕಾಸಿನ ವಿಚಾರದಲ್ಲಿ ಕಟ್ಟುನಿಟ್ಟಾಗಿ ಲೆಕ್ಕವಿಡಿ. ಯೋಗ್ಯ ವಯಸ್ಕರಿಗೆ ಸೂಕ್ತ ಸಂಬಂಧಕ್ಕಾಗಿ ಕೆಲವು ದಿನ ಕಾಯಬೇಕಾಗುತ್ತದೆ. ವ್ಯಾಪಾರಿಗಳಿಗೆ ನಿವ್ವಳ ಲಾಭ ಗಳಿಸುವ ಅವಕಾಶ ಲಭ‍್ಯವಾಗಲಿದೆ. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ.
 
ಕುಂಭ: ಮಹಿಳೆಯರಿಗೆ ಆರೋಗ್ಯದಲ್ಲಿ ಏರುಪೇರಾಗುವ ಸಂಭವವಿದೆ. ರಾಜಕೀಯ ವರ್ಗದವರು ಎಚ್ಚರಿಕೆಯಿಂದ ವ್ಯವಹರಿಸಬೇಕು. ನೆರೆಹೊರೆಯವರ ಸಹಕಾರದಿಂದ ಕಷ್ಟಗಳು ದೂರವಾಗಲಿದೆ. ಅನಿರೀಕ್ಷಿತ ಅತಿಥಿಯ ಆಗಮನವಾಗಲಿದೆ.
 
ಮೀನ: ಹಿರಿಯರಿಂದ ಬಂದ ಬಳವಳಿಗಳನ್ನು ಕಳೆದುಕೊಳ್ಳಲಿದ್ದೀರಿ. ಮಾನಸಿಕವಾಗಿ ಬೇಡದ ಚಿಂತೆಗಳು ನಿರುತ್ಸಾಹ ಉಂಟುಮಾಡಬಹುದು. ಕುಟುಂಬ ವರ್ಗದವರ ಸಹಕಾರ ಸಿಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಉತ್ತಮ ಫಲ ಸಿಗಲಿದೆ.
ಇದರಲ್ಲಿ ಇನ್ನಷ್ಟು ಓದಿ :