ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮಹಿಳೆಯರಿಗೆ ಗೃಹಕೃತ್ಯಗಳಿಂದ ದೇಹಾಯಾಸವಾಗಬಹುದು. ಸಂಗಾತಿಯೊಂದಿಗೆ ಮನಸ್ತಾಪವಾಗದಂತೆ ಎಚ್ಚರಿಕೆ ವಹಿಸಿ. ಮಾನಸಿಕ ಚಿಂತೆಗಳಿಗೆ ಒಂದು ಪರಿಹಾರ ಕಂಡುಕೊಳ್ಳಲಿದ್ದೀರಿ. ಆರ್ಥಿಕವಾಗಿ ನಾನಾ ರೀತಿಯ ಖರ್ಚುಗಳು ಎದುರಾಗಲಿವೆ.ವೃಷಭ: ದೈವಾನುಗ್ರಹದಿಂದ ಇಂದು ಮನೆಯಲ್ಲಿ ಸುಖ ಶಾಂತಿ ನೆಲೆಸಿರಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ಆದರೆ ನೆರೆಹೊರೆಯವರೊಂದಿಗೆ ವರ್ತಿಸುವಾಗ ಎಚ್ಚರಿಕೆಯಿಂದಿರಿ.ಮಿಥುನ: ಮನದಲ್ಲಿ ಅಂದುಕೊಂಡಿದ್ದ ಕೆಲಸಗಳನ್ನು ಕಾರ್ಯರೂಪಕ್ಕೆ ತರಲಿದ್ದೀರಿ. ವ್ಯಾಪಾರ, ವ್ಯವಹಾರದಲ್ಲಿ