ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಸಾಮಾಜಿಕ ಕಾರ್ಯಗಳಿಂದ ಮನಸ್ಸಿಗೆ ತೃಪ್ತಿ ಸಿಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಹೊಸ ಸವಾಲುಗಳಿಗೆ ಸಿದ್ಧರಾಗಬೇಕಾಗುತ್ತದೆ. ಆರ್ಥಿಕವಾಗಿ ಆದಾಯಕ್ಕೆ ಕೊರತೆಯಿರದು. ಆದರೆ ದುಂದು ವೆಚ್ಚಕ್ಕೆ ಕಡಿವಾಣ ಹಾಕುವುದು ಉತ್ತಮ.ವೃಷಭ: ಭವಿಷ್ಯದ ಯೋಜನೆಗಳನ್ನು ಕಾರ್ಯರೂಪಕ್ಕೆ ತರಲು ರೂಪುರೇಷೆ ಸಿದ್ಧ ಮಾಡಲಿದ್ದೀರಿ. ಅವಿವಾಹಿತರಿಗೆ ಶೀಘ್ರದಲ್ಲೇ ಕಂಕಣ ಬಲ ಕೂಡಿಬರುವುದು. ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಲಭಿಸಲಿದೆ. ವಿದ್ಯಾರ್ಥಿಗಳಿಗೆ ಮುನ್ನಡೆಯಿರಲಿದೆ.ಮಿಥುನ: ಕಾರ್ಯಕ್ಷೇತ್ರದಲ್ಲಿ ಕಷ್ಟಗಳು ಎದುರಾಗಲಿವೆ. ಅದನ್ನು