ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಮನಸ್ಸು ಹಲವು ಆಕರ್ಷಣೆಗೊಳಗಾಗಲಿದೆ. ಮನೋನಿಗ್ರಹ ಮಾಡುವುದು ಅಗತ್ಯ. ಮಹಿಳೆಯರೊಂದಿಗೆ ವ್ಯವಹರಿಸುವಾಗ ಎಚ್ಚರಿಕೆಯಿಂದಿರಿ. ಆಪ್ತರೊಡನೆ ನಿಮ್ಮ ಮನಸ್ಸಿನ ದುಗುಡಗಳನ್ನು ಹಂಚಿಕೊಳ್ಳುವುದರಿಂದ ಸಮಾಧಾನ ಸಿಗಲಿದೆ.ವೃಷಭ: ಯೋಗ್ಯ ವಯಸ್ಕರಿಗೆ ವೈವಾಹಿಕ ಸಂಬಂಧಗಳು ಕೂಡಿಬರಲಿವೆ. ಆರ್ಥಿಕವಾಗಿ ಅನಿರೀಕ್ಷಿತ ಖರ್ಚು ವೆಚ್ಚಗಳಿಂದ ಚಿಂತೆಯಾಗಲಿದೆ. ಸರಕಾರಿ ಉದ್ಯೋಗಿಗಳಿಗೆ ಸ್ಥಾನಪಲ್ಲಟ ಸಾಧ್ಯತೆಯಿದೆ. ದೇಹಾರೋಗ್ಯದಲ್ಲಿ ಸುಧಾರಣೆಯಾಗಲಿದೆ. ಚಿಂತೆ ಬೇಡ.ಮಿಥುನ: ಉದ್ಯೋಗ ಕ್ಷೇತ್ರದಲ್ಲಿ ಹೊಸ ಬದಲಾವಣೆಗಳಿಗೆ ಹೊಂದಿಕೊಳ್ಳಲು ಮನಸ್ಸಿಗೆ ಕಷ್ಟವಾಗಬಹುದು.