ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಸರಕಾರಿ ಕೆಲಸಗಳಲ್ಲಿ ಅಡ್ಡಿ ಆತಂಕಗಳು ಎದುರಾಗಲಿವೆ. ಲೆಕ್ಕ ಪತ್ರಗಳ ಬಗ್ಗೆ ನಿಗಾ ಇರಲಿ. ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿವಹಿಸಬೇಕು. ಅನಗತ್ಯ ವಿಚಾರಗಳಿಗೆ ತಲೆಕೆಡಿಸಿಕೊಳ್ಳಬೇಡಿ. ಖರ್ಚು ವೆಚ್ಚಗಳು ಮಿತವಾಗಿದ್ದರೆ ಭವಿಷ್ಯದ ದೃಷ್ಟಿಯಿಂದ ಉತ್ತಮ.ವೃಷಭ: ದೈವಾನುಕೂಲದಿಂದ ನಿಮ್ಮ ಮನೋಕಾಮನೆಗಳು ಪೂರ್ತಿಯಾಗಲಿವೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಬಂಧು ಮಿತ್ರರ ಸಹಕಾರ ಸಿಗಲಿದೆ. ಕೋರ್ಟು ಕಚೇರಿ ವ್ಯವಹಾರಗಳಲ್ಲಿ ಕೊಂಚ ಹಿನ್ನಡೆಯಾದರೂ ಚಿಂತೆ