ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಮನೆಗೆ ಬೇಕಾದ ಹೊಸ ವಸ್ತುಗಳ ಖರೀದಿ ಮಾಡಲಿದ್ದೀರಿ. ಮಕ್ಕಳ ವಿದ್ಯಾಭ್ಯಾಸದ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಲಿದ್ದೀರಿ. ಕೃಷಿಕರಿಗೆ ಪರಿಶ್ರಮಕ್ಕೆ ತಕ್ಕ ಫಲ ಸಿಗಲಿದೆ. ದಿನದಂತ್ಯಕ್ಕೆ ಕಿರು ಸಂಚಾರ ಮಾಡಬೇಕಾಗುತ್ತದೆ. ದೇವರ ಪ್ರಾರ್ಥನೆ ಮಾಡಿ.ವೃಷಭ: ನಿರುದ್ಯೋಗಿಗಳಿಗೆ ಬಯಸಿದ ಉದ್ಯೋಗಕ್ಕೆ ಸಂದರ್ಶನ ಕರೆ ಬರಲಿದೆ. ದೇಹಾರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಶುಭ ಮಂಗಲ ಕಾರ್ಯಗಳಲ್ಲಿ ಭಾಗಿಯಾಗಲಿದ್ದೀರಿ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದಿನದಂತ್ಯಕ್ಕೆ