ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಗೃಹ ಬಳಕೆ ವಸ್ತುಗಳ ಖರೀದಿಗಾಗಿ ಖರ್ಚು ವೆಚ್ಚಗಳು ಅಧಿಕವಾಗಲಿದೆ. ದೂರ ಪ್ರಯಾಣದಿಂದ ಕಾರ್ಯಸಾಧನೆಯಾಗಲಿದೆ. ಉದ್ಯೋಗ ಕ್ಷೇತ್ರದಲ್ಲಿ ಅನಗತ್ಯ ವಿಚಾರಗಳ ಬಗ್ಗೆ ತಲೆಕೆಡಿಸಿಕೊಳ್ಳಬೇಕಾಗಿಲ್ಲ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ವೃಷಭ: ವಿದ್ಯಾರ್ಥಿಗಳ ಅಭ್ಯಾಸದಲ್ಲಿ ತೊಡಕುಗಳು ಎದುರಾಗಬಹುದು. ಸರಕಾರಿ ಕೆಲಸಗಳಿಗಾಗಿ ಓಡಾಟ ನಡೆಸಬೇಕಾಗುತ್ತದೆ. ಹಿರಿಯರ ಸಲಹೆಗಳನ್ನು ಪಾಲಿಸಿದರೆ ಉತ್ತಮ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ಮಿಥುನ: ನಯವಾಗಿ ಮಾತನಾಡಿಕೊಂಡು ಹತ್ತಿರವಾಗಲು ಬಯಸುವವರು ಇಂದಿಗೆ ಆಪ್ತರೆನಿಸಬಹುದು.