ಇಂದಿನ ರಾಶಿ ಫಲ ಹೇಗಿದೆ ಗೊತ್ತಾ?

ಬೆಂಗಳೂರು| Krishnaveni K| Last Modified ಬುಧವಾರ, 24 ಜೂನ್ 2020 (09:01 IST)
ಬೆಂಗಳೂರು: ಇಂದಿನ  ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.

 
ಮೇಷ: ಮನಸ್ಸಿಗೆ ಆದ ಗಾಯ ಮರೆಯಲು ಕಷ್ಟವಾಗಬಹುದು. ಆದರೆ ಅನಿವಾರ್ಯವಾಗಿ ಹೊಂದಾಣಿಕೆಯಿಂದ ನಡೆದುಕೊಳ್ಳಬೇಕಾಗುತ್ತದೆ. ಮೇಲಧಿಕಾರಿಗಳ ಕಿರಿ ಕಿರಿಗೆ ತಕ್ಕ ಉತ್ತರ ಕೊಡಲಿದ್ದೀರಿ. ಹಣಕಾಸಿನ ಖರ್ಚು ವೆಚ್ಚದ ಬಗ್ಗೆ ಜಾಗ್ರತೆಯಿರಲಿ.
 
ವೃಷಭ: ಅವಿವಾಹಿತರಿಗೆ ಶೀಘ‍್ರದಲ್ಲೇ ಕಂಕಣ ಬಲ ಕೂಡಿಬರಲಿದೆ. ನಿರುದ್ಯೋಗಿಗಳಿಗೆ ಸಾಕಷ್ಟು ಅವಕಾಶಗಳು ಎದುರಾಗಲಿವೆ. ಜಾಣ್ಮೆಯಿಂದ ಬಳಸಿಕೊಳ್ಳಬೇಕು. ಹಳೇ ಮಿತ್ರರ ಭೇಟಿಯಿಂದ ಮನಸ್ಸಿಗೆ ಸಂತಸವಾಗಲಿದೆ. ದೇವತಾ ಪ್ರಾರ್ಥನೆ ಮರೆಯದಿರಿ.
 
ಮಿಥುನ: ವೃತ್ತಿರಂಗದಲ್ಲಿ ಶತ್ರುಕಾಟ ತಪ್ಪಲಿದೆ. ನಿಮ್ಮ ಕೆಲಸಗಳನ್ನು ನಿರೀಕ್ಷಿತ ರೀತಿಯಲ್ಲಿ ಮಾಡಿ ಮುಗಿಸಲಿದ್ದೀರಿ. ಹಿರಿಯ ಅಧಿಕಾರಿಗಳೊಂದಿಗೆ ಭಿನ್ನಾಭಿಪ್ರಾಯವಾಗಬಹುದು. ತಾಳ್ಮೆಯಿಂದ ನಿಭಾಯಿಸಿ. ಸಂಗಾತಿಯ ಪ್ರೀತಿಗೆ ಭಾಜನರಾಗಲಿದ್ದೀರಿ. ಆರೋಗ್ಯದ ಬಗ್ಗೆ ಕಾಳಜಿಯಿರಲಿ.
 
ಕರ್ಕಟಕ: ವಿದ್ಯಾರ್ಥಿಗಳಿಗೆ ಪ್ರಯತ್ನಬಲವಿದ್ದರೆ ಮಾತ್ರ ಯಶಸ್ಸು ಸಾಧ‍್ಯ. ಶಿಕ್ಷಕ ವೃಂದದವರಿಗೆ ಉದ್ಯೋಗದಲ್ಲಿ ಅಡೆತಡೆಗಳು ಸಾಮಾನ್ಯ. ನಿಮ್ಮ ಮಾತೇ ನಡೆಯಬೇಕೆಂಬ ಹಠ ಬಿಟ್ಟರೆ ಉತ್ತಮ. ಕಾರ್ಮಿಕರ ಪರಿಸ್ಥಿತಿ ಸುಧಾರಣೆಯಾಗಲಿದೆ.
 
ಸಿಂಹ: ಸಾಂಸಾರಿಕವಾಗಿ ನಿಮ್ಮ ಕೆಲವೊಂದು ನಿರ್ಧಾರಗಳು ಕುಟುಂಬ ಸದಸ್ಯರೊಡನೆ ಭಿನ್ನಾಭಿಪ್ರಾಯಕ್ಕೆ ಕಾರಣವಾದೀತು. ಅನವಶ್ಯಕ ಕೋಪ ತಾಪಕ್ಕೆ ಬುದ್ಧಿ ಕೊಟ್ಟು ಆತುರದ ನಿರ್ಧಾರ ಕೈಗೊಳ್ಳಬೇಡಿ. ಕುಲದೇವರ ಪ್ರಾರ್ಥನೆ ಮಾಡಿ ಮುನ್ನಡೆಯಿರಿ.
 
ಕನ್ಯಾ: ಅಧಿಕ ಧನಾರ್ಜನೆಯ ದುರಾಸೆಯಿಂದ ಅಡ್ಡ ದಾರಿ ಹಿಡಿಯಬೇಡಿ. ಕೆಟ್ಟ ಸ್ನೇಹ ಸಂಗದಿಂದ ದೂರವಿರುವುದೇ ಉತ್ತಮ. ವ್ಯಾಪಾರ, ವ್ಯವಹಾರದಲ್ಲಿ ತಕ್ಕ ಮಟ್ಟಿಗಿನ ಲಾಭ ಕಂಡುಬರಲಿದೆ. ಅವಿವಾಹಿತರಿಗೆ ಯೋಗ್ಯ ಸಂಬಂಧ ಕೂಡಿಬರಲಿದೆ.
 
ತುಲಾ: ಅಧಿಕಾರಿ ವರ್ಗದವರಿಗೆ ಜವಾಬ್ಧಾರಿಗಳು ಹೆಚ್ಚಲಿವೆ. ಶೈಕ್ಷಣಿಕ ರಂಗದಲ್ಲಿ ಕೆಲಸ ಮಾಡುವವರಿಗೆ ಉನ್ನತ ಸ್ಥಾನ ಮಾನದ ಯೋಗವಿದೆ. ಸಂಗಾತಿಯೊಂದಿಗೆ ಅನವಶ್ಯಕ ಮನಸ್ತಾಪ ಮಾಡಿಕೊಳ್ಳಬೇಡಿ. ಕಾರ್ಯನಿಮಿತ್ತ ಕಿರು ಸಂಚಾರ ಮಾಡಬೇಕಾಗುತ್ತದೆ.
 
ವೃಶ್ಚಿಕ: ದೇಹಾರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ. ಮನೆಯಲ್ಲಿ ಶುಭ ಮಂಗಲ ಕಾರ್ಯ ನೆರವೇರಿಸಲು ಖರ್ಚು ವೆಚ್ಚವಾದೀತು. ಕೌಟುಂಬಿಕವಾಗಿ ಅನಿರೀಕ್ಷಿತ ಅತಿಥಿಗಳ ಆಗಮನದಿಂದ ಸಂತಸವಾಗಲಿದೆ. ವಾಹನ ಸಂಚಾರದಲ್ಲಿ ಜಾಗ್ರತೆ.
 
ಧನು: ವೃತ್ತಿರಂಗದಲ್ಲಿ ಗಮನಾರ್ಹ ಬದಲಾವಣೆಗಳಾಗಲಿವೆ. ನಿಮ್ಮ ಸ್ಥಾನಕ್ಕೆ ಮತ್ತೊಬ್ಬರ ಆಗಮನವಾಗಬಹುದು ಅಥವಾ ನಿಮ್ಮ ಕ್ರಿಯಾಶೀಲತೆಗೆ ಪ್ರಶಂಸೆ ವ್ಯಕ್ತವಾಗಬಹುದು. ಅತಿಯಾದ ಚಿಂತೆ ಮಾಡಬೇಡಿ. ಅಧಿಕ ಖರ್ಚು ವೆಚ್ಚಗಳಾಗದಂತೆ ಎಚ್ಚರಿಕೆ ವಹಿಸಿ.
 
ಮಕರ: ನಿಮ್ಮ ಕಾರ್ಯಕ್ಷೇತ್ರದಲ್ಲಿ ಗಮನಾರ್ಹ ಬದಲಾವಣೆಗಳಾಗಲಿವೆ. ಆರ್ಥಿಕವಾಗಿ ಬಾಕಿ ಹಣ ಸಂದಾಯವಾಗಲಿದ್ದು, ಹಣಕಾಸಿನ ಪರಿಸ್ಥಿತಿ ಸುಧಾರಣೆಯಾಗಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವಿರಿ.
 
ಕುಂಭ: ವೃತ್ತಿರಂಗದಲ್ಲಿ ಅನವಶ್ಯಕ ಮನಸ್ತಾಪಗಳಾಗದಂತೆ ಎಚ್ಚರಿಕೆ ವಹಿಸಿ. ಆರ್ಥಿಕವಾಗಿ ಸರಿಯಾದ ಲೆಕ್ಕಾಚಾರವಿಲ್ಲದೇ ಹೆಜ್ಜೆಯಿಟ್ಟರೆ ಮುಂದೆ ತೊಂದರೆಯಾಗಬಹುದು. ಕುಟುಂಬ ಸದಸ್ಯರ ಆರೋಗ್ಯದಲ್ಲಿ ಏರುಪೇರಾಗಬಹುದು. ಎಚ್ಚರಿಕೆ ಅಗತ್ಯ.
 
ಮೀನ: ದೈವಾನುಗ್ರಹದಿಂದ ನೀವು ಅಂದುಕೊಂಡ ಕೆಲಸಗಳು ಸುಗಮವಾಗಿ ನೆರವೇರಲಿದೆ. ಆರ್ಥಿಕ ಅಡಚಣೆಗಳು ಎದುರಾದರೂ ಹೆಚ್ಚಿನ ತೊಂದರೆಯಾಗದು. ಆದರೆ ಯಾವುದರ ಬಗ್ಗೆಯೂ ಉದಾಸೀನತೆ ಬೇಡ. ಬಂಧು ಮಿತ್ರರ ಆಗಮನವಾಗಲಿದೆ.
ಇದರಲ್ಲಿ ಇನ್ನಷ್ಟು ಓದಿ :