ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಕಾರ್ಯಕ್ಷೇತ್ರದಲ್ಲಿ ಹಲವಾರು ಸಮಸ್ಯೆಗಳು ಎದುರಾದೀತು. ಬೇರೆಯವರ ಬಗ್ಗೆ ಚಿಂತೆ ಮಾಡದೇ ನಿಮ್ಮ ಪಾಲಿನ ಕರ್ತವ್ಯ ನಿಭಾಯಿಸಿದರೆ ತೊಂದರೆಯಾಗದು. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.ವೃಷಭ: ಎಲ್ಲವನ್ನೂ ನಿಭಾಯಿಸುವ ಛಾತಿ ಬೆಳೆಸಿಕೊಳ್ಳಬೇಕು. ಉದ್ಯೋಗ ಕ್ಷೇತ್ರದಲ್ಲಿ ಬರುವ ಸಮಸ್ಯೆಗಳಿಗೆ ಕ್ರಿಯಾತ್ಮಕ ಯೋಚನೆಗಳಿಂದ ಪರಿಹಾರ ಕಂಡುಕೊಳ್ಳಲಿದ್ದೀರಿ. ಧಾರ್ಮಿಕ ಕಾರ್ಯಗಳಲ್ಲಿ ಭಾಗಿಯಾಗುವ ಯೋಗವಿದೆ. ವಿದ್ಯಾರ್ಥಿಗಳಿಗೆ ಮುನ್ನಡೆ.ಮಿಥುನ: ಸಾಂಸಾರಿಕ ಜೀವನದಲ್ಲಿ