ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಆದಾಯ ವೃದ್ಧಿಗೆ ಸಾಕಷ್ಟು ಅವಕಾಶಗಳು ಒದಗಿಬರಲಿವೆ. ಉದ್ಯೋಗ ಕ್ಷೇತ್ರದಲ್ಲಿ ನಿಮಗೆ ಸಂಬಂಧ ಪಡದ ವಿಚಾರಗಳ ಬಗ್ಗೆ ಅನಗತ್ಯ ಚಿಂತೆ ಬೇಡ. ದೇಹಾರೋಗ್ಯದಲ್ಲಿ ಸುಧಾರಣೆಯಾಗಿ ಮನಸ್ಸಿಗೆ ನೆಮ್ಮದಿ ಸಿಗಲಿದೆ. ದೇವತಾ ಕಾರ್ಯದಲ್ಲಿ ಭಾಗಿಯಾಗುವಿರಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕಾಲೆಳೆಯುವವರ ಬಗ್ಗೆ ಹೆಚ್ಚು ತಲೆಕೆಡಿಸಿಕೊಳ್ಳಬೇಕಾಗಿಲ್ಲ. ನಿಮ್ಮ ಕ್ರಿಯಾತ್ಮಕ ಕೆಲಸಗಳಿಗೆ ಪ್ರಶಂಸೆ ವ್ಯಕ್ತವಾಗಲಿದೆ. ಯೋಗ್ಯ ವಯಸ್ಕರಿಗೆ ಕಂಕಣ ಬಲ ಕೂಡಿಬರಲಿದೆ. ಮನೆಯಲ್ಲಿ ಶುಭ