ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ನೆರೆಹೊರೆಯವರು ನಿಮ್ಮ ಕೆಲಸಗಳಿಗೆ ಅಡ್ಡಗಾಲು ಹಾಕುತ್ತಾರೆ. ಹೊಸ ವಿಚಾರಗಳನ್ನು ಕಲಿತುಕೊಳ್ಳಲು ಉತ್ಸುಕರಾಗುತ್ತೀರಿ. ಮಕ್ಕಳ ಭವಿಷ್ಯಕ್ಕೆ ಯೋಜನೆ ರೂಪಿಸಲಿದ್ದೀರಿ. ದೇಹಾರೋಗ್ಯದಲ್ಲಿ ಚೇತರಿಕೆ ಕಂಡುಬರಲಿದೆ.ವೃಷಭ: ಮನಸ್ಸಿಗೆ ಹಿಡಿಸಿದ ಕೆಲಸ ಮಾಡುವುದರಿಂದ ನಿಮಗೂ ಸಂತೃಪ್ತಿ, ಮಾಡಿದ ಕೆಲಸವೂ ಪೂರ್ತಿಯಾಗುವುದು. ಮಹಿಳೆಯರು ಅಲಂಕಾರಿಕ ವಸ್ತುಗಳ ಖರೀದಿಗೆ ಖರ್ಚು ಮಾಡಲಿದ್ದಾರೆ. ದೇವತಾ ಕಾರ್ಯಗಳಿಂದ ಹಿರಿಯರು ಸಂತೃಪ್ತರಾಗುವರು.ಮಿಥುನ: ಬಹಳ ದಿನಗಳಿಂದ ಕಾಡುತ್ತಿದ್ದ ಸಾಲದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳುವಿರಿ.