ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಆರ್ಥಿಕ ಪರಿಸ್ಥಿತಿಯಲ್ಲಿ ಏರುಪೇರಾಗಲಿದ್ದು, ಅಧಿಕ ಖರ್ಚು ವೆಚ್ಚಗಳಾಗಲಿವೆ. ಮಕ್ಕಳ ಭವಿಷ್ಯಕ್ಕಾಗಿ ಯೋಜನೆ ರೂಪಿಸಬೇಕಾಗುತ್ತದೆ. ವೃತ್ತಿರಂಗದಲ್ಲಿ ಸಮಾಧಾನಕರ ವಾತಾವರಣವಿರಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ.ವೃಷಭ: ಸರಕಾರಿ ಉದ್ಯೋಗಿಗಳಿಗೆ ಬಿಡುವಿಲ್ಲದ ಕಾರ್ಯದೊತ್ತಡದಿಂದ ದೇಹ ಹೈರಾಣಾಗಬಹುದು. ಕೃಷಿಕರಿಗೆ ತಮ್ಮ ಚಟುವಟಿಕೆಗಳಿಗೆ ಅಡ್ಡಿ ಎದುರಾಗಲಿದೆ. ಸಾಮಾಜಿಕ ಕಾರ್ಯದಿಂದ ಮನಸ್ಸಿಗೆ ನೆಮ್ಮದಿಯಾಗುವುದು. ಆರೋಗ್ಯದ ಬಗ್ಗೆ ಕಾಳಜಿಯಿರಲಿ.ಮಿಥುನ: ನಿಮ್ಮ ಕೆಲಸ ಕಾರ್ಯಗಳಿಗೆ ಸಂಗಾತಿಯ ಸಹಕಾರ ಸಿಗಲಿದೆ.