ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ.ಮೇಷ: ಉದ್ವೇಗ ಆತುರಕ್ಕೆ ಕಟ್ಟು ಬಿದ್ದು ಯಾವುದೇ ನಿರ್ಧಾರ ಕೈಗೊಳ್ಳಬೇಡಿ. ಕಾರ್ಯದೊತ್ತಡದಿಂದ ದೇಹಾಯಾಸವಾಗಬಹುದು. ನಿಮ್ಮ ತಾಳ್ಮ ಪರೀಕ್ಷೆಯ ಕಾಲವಿದು. ದೇಹಾರೋಗ್ಯದ ಬಗ್ಗೆ ಅನಗತ್ಯ ಚಿಂತೆ ಬೇಡ.ವೃಷಭ: ಆರೋಗ್ಯದಲ್ಲಿ ಏರುಪೇರಾಗುತ್ತಲೇ ಇರಲಿದೆ. ಆದರೆ ಮಾನಸಿಕ ಸ್ಥೈರ್ಯ ಕಳೆದುಕೊಳ್ಳಬೇಡಿ. ನಿಮ್ಮ ಕಷ್ಟಗಳಿಗೆ ಸಂಗಾತಿಯ ಸಹಕಾರ ದೊರೆಯಲಿದೆ. ಅವಿವಾಹಿತರಿಗೆ ಶೀಘ್ರ ಕಂಕಣ ಬಲ ಕೂಡಿಬರಲಿದೆ. ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮಪಡಬೇಕಾಗಬಹುದು.ಮಿಥುನ: ಅನ್ಯರ ಕಷ್ಟಗಳಿಗೆ ಹೆಗಲು ಕೊಡಲು