ಬೆಂಗಳೂರು: ಇಂದಿನ ದಿನದ ದ್ವಾದಶ ರಾಶಿ ಫಲ ಹೀಗಿದೆ ನೋಡಿ. ಮೇಷ: ಉದ್ಯೋಗ ಕ್ಷೇತ್ರದಲ್ಲಿ ನಿಮ್ಮನ್ನು ಮೂಲೆಗುಂಪು ಮಾಡುವ ವ್ಯವಸ್ಥಿತ ಸಂಚು ಬೆಳಕಿಗೆ ಬರಲಿದೆ. ಸಾಮಾಜಿಕ ಕೆಲಸಗಳಿಂದ ಮನಸ್ಸಿಗೆ ಖುಷಿಯಾಗಲಿದೆ. ಹೆಸರು, ಕೀರ್ತಿ ಸಂಪಾದಿಸಲಿದ್ದೀರಿ. ದೇಹಾರೋಗ್ಯದ ಬಗ್ಗೆ ಕಾಳಜಿವಹಿಸಿ.ವೃಷಭ: ವೃತ್ತಿರಂಗದಲ್ಲಿ ನಿಮ್ಮ ಕಾರ್ಯವೈಖರಿ ಮೇಲಧಿಕಾರಿಗಳ ಪ್ರಶಂಸೆಗೊಳಗಾಗಲಿದೆ. ಆರ್ಥಿಕವಾಗಿ ಹಣಕಾಸಿನ ಹರಿವಿಗೆ ತೊಂದರೆಯಿರದು. ಆದರೆ ಅನಗತ್ಯ ಖರ್ಚು ವೆಚ್ಚಗಳಿಗೆ ಕಡಿವಾಣ ಹಾಕಿ. ಸಂಗಾತಿಯ ಮನದಾಸೆ ಪೂರೈಸಲಿದ್ದೀರಿ.ಮಿಥುನ: ಕಾರ್ಯರಂಗದಲ್ಲಿ ನೀವು ಮಾಡಲು ಬಾಕಿ